‘ಡಿಸೆಂಬರ್ 31ಕ್ಕೆ ಸಿನಿಮಾ ರಿಲೀಸ್ ಮಾಡಿದ್ರೆ ಥಿಯೇಟರ್ಗೆ ಮುತ್ತಿಗೆ’; ಕನ್ನಡಪರ ಹೋರಾಟಗಾರರ ಎಚ್ಚರಿಕೆ
ಡಿಸೆಂಬರ್ 31ರಂದು ಸಿನಿಮಾ ರಿಲೀಸ್ ಮಾಡಿದರೆ ಚಿತ್ರಮಂದಿರಕ್ಕೆ ಮುತ್ತಿಗೆ ಹಾಕುವ ಎಚ್ಚರಿಕೆಯನ್ನು ಕರ್ನಾಟಕ ಪರ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಜಿ.ಪಿ. ವಿಶ್ವನಾಥ್ ನೀಡಿದ್ದಾರೆ.
ಕನ್ನಡದ ಬಾವುಟಕ್ಕೆ ಅವಮಾನ, ಎಂಇಎಸ್ ಪುಂಡಾಟಿಕೆ ಖಂಡಿಸಿ ಡಿಸೆಂಬರ್ 31ರಂದು ಕರ್ನಾಟಕ ಬಂದ್ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಇದಕ್ಕೆ ಅನೇಕ ಸಂಘಟನೆಗಳು ಬೆಂಬಲ ಸೂಚಿಸುತ್ತಿವೆ. ಕನ್ನಡ ಚಿತ್ರರಂಗದ ಕಡೆಯಿಂದ ಈ ಬಂದ್ಗೆ ನೈತಿಕ ಬೆಂಬಲ ಮಾತ್ರ ನೀಡಲಾಗುತ್ತಿದೆ. ಡಿಸೆಂಬರ್ 31 ಶುಕ್ರವಾರ ಬಂದಿದೆ. ಆ ದಿನ ಹಲವು ಸಿನಿಮಾಗಳು ರಿಲೀಸ್ ಆಗುತ್ತಿವೆ. ಈಗಾಗಲೇ ಕೊವಿಡ್ನಿಂದ ಚಿತ್ರರಂಗದ ಸಾಕಷ್ಟು ತೊಂದರೆ ಅನುಭವಿಸಿದೆ. ಈಗ ಸಿನಿಮಾ ರಿಲೀಸ್ ದಿನವೇ ಬಂದ್ ಆದರೆ, ಚಿತ್ರರಂಗದ ಮೇಲೆ ಹೊಡೆತ ಬೀಳಲಿದೆ. ಈ ಕಾರಣಕ್ಕೆ ಕೇವಲ ನೈತಿಕ ಬೆಂಬಲ ನೀಡುವ ನಿರ್ಧಾರಕ್ಕೆ ವಾಣಿಜ್ಯ ಮಂಡಳಿ ಬಂದಿತ್ತು. ಇದನ್ನು ಕನ್ನಡ ಪರ ಸಂಘಟನೆಗಳು ಖಂಡಿಸಿವೆ. ಸಿನಿಮಾ ರಿಲೀಸ್ ಮಾಡಿದರೆ ಚಿತ್ರಮಂದಿರಕ್ಕೆ ಮುತ್ತಿಗೆ ಹಾಕುವ ಎಚ್ಚರಿಕೆಯನ್ನು ಕರ್ನಾಟಕ ಪರ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಜಿ.ಪಿ. ವಿಶ್ವನಾಥ್ ನೀಡಿದ್ದಾರೆ.
ಇದನ್ನೂ ಓದಿ: ನಟಿ ಅದಿತಿ ಪ್ರಭುದೇವ ಜತೆ ಇರೋ ಹುಡುಗ ಯಾರು? ಶುಭಾಶಯ ತಿಳಿಸಿದ ಅಭಿಮಾನಿಗಳು