ಪ್ರತಿಮೆಗಳನ್ನು ಭಗ್ನಗೊಳಿಸುವುದು ದೇಶಭಕ್ತರ ಕೆಲಸವಲ್ಲ: ಸಿಎಂ ಬಸವರಾಜ ಬೊಮ್ಮಾಯಿ
ಗಲಭೆಯ ಹಿಂದೆ ಬೆಳಗಾವಿಯಲ್ಲಿ ಅಧಿವೇಶನ ಸೇರಿ ಬೇರೆ ಬೇರೆ ಕಾರಣಗಳಿವೆ. ಈ ರೀತಿ ಪದೇ ಪದೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು. ಪ್ರತಿಮೆಗಳನ್ನು ಭಗ್ನಗೊಳಿಸುವುದು ದೇಶಭಕ್ತರ ಕೆಲಸವಲ್ಲ. ಕೆಲ ಪುಂಡರಿಂದ ಇಂತಹ ಕೃತ್ಯವಾಗಿದೆ. ಅವರನ್ನು ಸದೆಬಡಿಯುತ್ತೇವೆ ಎಂದು ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹುಬ್ಬಳ್ಳಿ: ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದವರ ವಿರುದ್ಧ ಕಠಿಣಕ್ರಮ ತೆಗೆದುಕೊಳ್ಳುತ್ತೇವೆ. ಬೆಳಗಾವಿಯಲ್ಲಿ ಈಗಾಗಲೇ ಕೆಲ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರತಿಮೆಗಳನ್ನು ಮಾಡಿರುವುದು ಗೌರವ ಸೂಚಿಸುವುದಕ್ಕಾಗಿ. ಅಂತಹ ಮಹಾನ್ ನಾಯಕರನ್ನು ಅಪಮಾನಿಸುವುದು ಸರಿಯಲ್ಲ. ಈ ರೀತಿ ವರ್ತಿಸಿ ಸಮಾಜದಲ್ಲಿ ಗಲಭೆ ಉಂಟುಮಾಡುವುದು ಸರಿಯಲ್ಲ. ಗಲಭೆಯ ಹಿಂದೆ ಹಲವಾರು ಕಾರಣಗಳಿವೆ. ಯಾರೇ ಆದರೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ಗಲಭೆಯ ಹಿಂದೆ ಬೆಳಗಾವಿಯಲ್ಲಿ ಅಧಿವೇಶನ ಸೇರಿ ಬೇರೆ ಬೇರೆ ಕಾರಣಗಳಿವೆ. ಈ ರೀತಿ ಪದೇ ಪದೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು. ಪ್ರತಿಮೆಗಳನ್ನು ಭಗ್ನಗೊಳಿಸುವುದು ದೇಶಭಕ್ತರ ಕೆಲಸವಲ್ಲ. ಕೆಲ ಪುಂಡರಿಂದ ಇಂತಹ ಕೃತ್ಯವಾಗಿದೆ. ಅವರನ್ನು ಸದೆಬಡಿಯುತ್ತೇವೆ ಎಂದು ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಇದನ್ನೂ ಓದಿ:
ಬೆಂಗಳೂರು ಹೊರವಲಯದಲ್ಲಿ ಎರಡು ದೊಡ್ಡ ಚಿತಾಗಾರ ಸ್ಥಾಪನೆ: ಸಿಎಂ ಬಸವರಾಜ ಬೊಮ್ಮಾಯಿ
ಸೈನಿಕರಿಗೆ ನೀಡುವ ಪ್ರಶಸ್ತಿ ಮೊತ್ತ 5 ಪಟ್ಟು ಹೆಚ್ಚಳ; ವಿಜಯ್ ದಿವಸ್ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ