AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದಲ್ಲಿ 160ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ; ಅಮಿತ್ ಶಾ ವಿಶ್ವಾಸ

ಬಿಹಾರದಲ್ಲಿ 160ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ; ಅಮಿತ್ ಶಾ ವಿಶ್ವಾಸ

ಸುಷ್ಮಾ ಚಕ್ರೆ
|

Updated on: Nov 07, 2025 | 7:28 PM

Share

ಬಿಹಾರ ಚುನಾವಣೆಯ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಚುನಾವಣಾ ಪ್ರಚಾರದಲ್ಲಿ ಮಾತನಾಡಿದ್ದು, 'ನಾವು 160 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಮತದಾರರು ಒಳನುಸುಳುವಿಕೆ ಮುಕ್ತ ರಾಜ್ಯವನ್ನು ಬಯಸುತ್ತಿದ್ದಾರೆ' ಎಂದಿದ್ದಾರೆ. ಮತದಾರರ ಪಟ್ಟಿ ತಿದ್ದುಪಡಿಗಳು ಮುಂದುವರಿಯುತ್ತವೆ. ಹೆಸರುಗಳನ್ನು ತೆಗೆದುಹಾಕುವವರು ಭಾರತೀಯ ನಾಗರಿಕರಲ್ಲ ಎಂದು ಅಮಿತ್ ಶಾ ವಾದಿಸಿದರು.

ಪಾಟ್ನಾ, ನವೆಂಬರ್ 7: ಬಿಹಾರದಲ್ಲಿ ಮೊದಲ ಹಂತದ ಮತದಾನದ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಚುನಾವಣಾ ಪ್ರಚಾರದ ವೇಳೆ, “ಈ ಬಾರಿಯ ಚುನಾವಣೆಯಲ್ಲಿ ಎನ್‌ಡಿಎ 160ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ಗೆಲುವು ಘೋಷಣೆಯಾಗುವುದೊಂದೇ ಬಾಕಿಯಿದೆ” ಎಂದಿದ್ದಾರೆ. “ಅಂದಾಜು 160 ಸ್ಥಾನಗಳು ಖಂಡಿತ ನಮಗೆ ಬರಲಿವೆ. ಅದಕ್ಕಿಂತ ಹೆಚ್ಚು ಸ್ಥಾನಗಳನ್ನು ನಾವು ಪಡೆಯುವ ಬಗ್ಗೆ ವಿಶ್ವಾಸವಿದೆ” ಎಂದು ಹೇಳಿದ್ದಾರೆ.

“ಕಳೆದ ಬಾರಿ ನಾವು ಬಹುಮತದಿಂದ ಗೆದ್ದಿದ್ದೇವೆ. ಈ ಬಾರಿಯೂ ನಾವು ಇನ್ನೂ ಹೆಚ್ಚಿನ ಬಹುಮತದೊಂದಿಗೆ ಗೆಲ್ಲುತ್ತೇವೆ” ಎಂದು ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More