ಕರ್ನಾಟಕ ವಿಚಾರ ಬಂದಾಗ ನಾವು ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ

Updated on: Jul 27, 2026 | 10:06 PM

ಸಿಎಂ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ದೆಹಲಿಯಲ್ಲಿ ನಡೆದ ಕರ್ನಾಟಕದ ಎಲ್ಲಾ ಸಂಸದರ ಸಭೆ ಅಂತ್ಯವಾಗಿದ್ದು, ಕೇಂದ್ರ ಸರ್ಕಾರದ ಮುಂದೆ ಬಾಕಿ ಇರುವ 13 ಅಂಶಗಳ ಬಗ್ಗೆ ಚರ್ಚೆಯಾಗಿದೆ. ಇನ್ನು ಸಭೆ ಬಳಿಕ ಬಿಜೆಪಿ ಎಂಪಿ ತೇಜಸ್ವಿ ಸೂರ್ಯ ಮಾತನಾಡಿ, ಸಿಎಂ ಮೊದಲ ಬಾರಿಗೆ ರಾಜ್ಯದ ಸಂಸದರ ಸಭೆ ಕರೆದಿದ್ದರು. ರಾಜ್ಯ ಸರ್ಕಾರದ ಬಾಕಿ ಯೋಜನೆಗಳ ಬಗ್ಗೆ ಚರ್ಚಿಸಲಾಗಿದೆ. ರಾಜ್ಯದ ವಿಚಾರ ಬಂದಾಗ ಪಕ್ಷಾತೀತವಾಗಿ ಕೆಲಸ ಮಾಡುತ್ತೇವೆ. ರಾಜ್ಯದ ವಿಚಾರ ಬಂದಾಗ ನಾವು ಸರ್ಕಾರದ ಜೊತೆ ಇರುತ್ತೇವೆ. ರಾಜ್ಯಕ್ಕಾಗಿ ಪಕ್ಷಾತೀತವಾಗಿ ಕೆಲಸ ಮಾಡುವುದು ನಮ್ಮ ಕರ್ತವ್ಯ ಎಂದರು.

ನವದೆಹಲಿ, (ಜುಲೈ 27): ಸಿಎಂ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ದೆಹಲಿಯಲ್ಲಿ ನಡೆದ ಕರ್ನಾಟಕದ ಎಲ್ಲಾ ಸಂಸದರ ಸಭೆ ಅಂತ್ಯವಾಗಿದ್ದು, ಕೇಂದ್ರ ಸರ್ಕಾರದ ಮುಂದೆ ಬಾಕಿ ಇರುವ 13 ಅಂಶಗಳ ಬಗ್ಗೆ ಚರ್ಚೆಯಾಗಿದೆ. ಇನ್ನು ಸಭೆ ಬಳಿಕ ಬಿಜೆಪಿ ಎಂಪಿ ತೇಜಸ್ವಿ ಸೂರ್ಯ ಮಾತನಾಡಿ, ಸಿಎಂ ಮೊದಲ ಬಾರಿಗೆ ರಾಜ್ಯದ ಸಂಸದರ ಸಭೆ ಕರೆದಿದ್ದರು. ರಾಜ್ಯ ಸರ್ಕಾರದ ಬಾಕಿ ಯೋಜನೆಗಳ ಬಗ್ಗೆ ಚರ್ಚಿಸಲಾಗಿದೆ. ರಾಜ್ಯದ ವಿಚಾರ ಬಂದಾಗ ಪಕ್ಷಾತೀತವಾಗಿ ಕೆಲಸ ಮಾಡುತ್ತೇವೆ. ರಾಜ್ಯದ ವಿಚಾರ ಬಂದಾಗ ನಾವು ಸರ್ಕಾರದ ಜೊತೆ ಇರುತ್ತೇವೆ. ರಾಜ್ಯಕ್ಕಾಗಿ ಪಕ್ಷಾತೀತವಾಗಿ ಕೆಲಸ ಮಾಡುವುದು ನಮ್ಮ ಕರ್ತವ್ಯ ಎಂದರು.

ಇದನ್ನೂ ಓದಿ: ಕರ್ನಾಟಕದ ಎಲ್ಲ ಸಂಸದರ ಜೊತೆ ಡಿಕೆ ಶಿವಕುಮಾರ್ ಸಭೆ , ಏನೇನು ಚರ್ಚೆ ಆಯ್ತು? ಇಲ್ಲಿದೆ ಡಿಟೇಲ್ಸ್

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More