ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ; 14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ 14 ಜನರು ಸಾವನ್ನಪ್ಪಿದ್ದಾರೆ. ಮಿಂಚು ಕೂಡ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಐಎಂಡಿ ಆರೆಂಜ್ ಅಲರ್ಟ್ ನೀಡಿದೆ. ಬಿಹಾರದ ಪಾಟ್ನಾ, ಗಯಾ, ಭಾಗಲ್ಪುರ್, ಮುಂಗೇರ್, ಪೂರ್ವ ಮತ್ತು ಪಶ್ಚಿಮ ಚಂಪಾರಣ್, ಸಿವಾನ್, ಸರನ್ ಮತ್ತು ಕತಿಹಾರ್ ಸೇರಿದಂತೆ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂಬರುವ ದಿನಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.
ಪಾಟ್ನಾ, ಜೂನ್ 17: ಬಿಹಾರದಲ್ಲಿ (Bihar Rains) ಭಾರೀ ಮಳೆಯಾಗುತ್ತಿದೆ. ಹಲವು ಪ್ರದೇಶಗಳಲ್ಲಿ ಮಳೆ ನೀರು ತುಂಬಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ. ಜೂನ್ 20ರವರೆಗೂ ಬಿಹಾರದಲ್ಲಿ ಮಳೆ ಮುಂದುವರೆಯಲಿದೆ. ಇನ್ನೂ 3 ದಿನ ಹಲವಾರು ಜಿಲ್ಲೆಗಳಲ್ಲಿ ಮಳೆ, ಗುಡುಗು ಮತ್ತು ಮಿಂಚಿನ ಎಚ್ಚರಿಕೆ ನೀಡಲಾಗಿದೆ. ಬಿಹಾರದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಇದುವರೆಗೂ ಮಳೆಯಿಂದ 14 ಜನರು ಮೃತಪಟ್ಟಿದ್ದಾರೆ. ಬಿಹಾರದ ಪಾಟ್ನಾ, ಗಯಾ, ಭಾಗಲ್ಪುರ್, ಮುಂಗೇರ್, ಪೂರ್ವ ಮತ್ತು ಪಶ್ಚಿಮ ಚಂಪಾರಣ್, ಸಿವಾನ್, ಸರನ್ ಮತ್ತು ಕತಿಹಾರ್ ಸೇರಿದಂತೆ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂಬರುವ ದಿನಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos