ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ

Updated on: May 29, 2025 | 5:28 PM

ಅವಧಿಗೂ ಮುನ್ನ ಕರ್ನಾಟಕದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಕಳೆದ ಒಂದು ವಾರರಿಂದ ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು ಭಾಗ ಸೇರಿದಂತೆ ಹಲವೆಡೆ ವರುಣನ ಅಬ್ಬರ ಮುಂದುವರೆದಿದೆ. ಹೊರಗೆ ಹೋಗಲು ಆಗದ ಸ್ಥಿತಿ ಬಂದಿದೆ. ಅಲ್ಲದೇ ಮಳೆರಾಯ ನಾನಾ ಅವಾಂತರಗಳನ್ನು ಸೃಷ್ಟಿಸಿದ್ದಾನೆ. ಚಳಿ ಗಾಳಿ ಜೊತೆಗೆ ಸುರಿಯುತ್ತಿರುವ ಮಳೆ ರಾಜ್ಯದ ಜನರನ್ನ ಸಂಕಷ್ಟಕ್ಕೆ ದೂಡಿದೆ. ಆದರೂ ಕರ್ನಾಟಕದಲ್ಲಿ ಇನ್ನೂ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು, (ಮೇ 29): ಅವಧಿಗೂ ಮುನ್ನ ಕರ್ನಾಟಕದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಕಳೆದ ಒಂದು ವಾರರಿಂದ ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು ಭಾಗ ಸೇರಿದಂತೆ ಹಲವೆಡೆ ವರುಣನ ಅಬ್ಬರ ಮುಂದುವರೆದಿದೆ. ಹೊರಗೆ ಹೋಗಲು ಆಗದ ಸ್ಥಿತಿ ಬಂದಿದೆ. ಅಲ್ಲದೇ ಮಳೆರಾಯ ನಾನಾ ಅವಾಂತರಗಳನ್ನು ಸೃಷ್ಟಿಸಿದ್ದಾನೆ. ಚಳಿ ಗಾಳಿ ಜೊತೆಗೆ ಸುರಿಯುತ್ತಿರುವ ಮಳೆ ರಾಜ್ಯದ ಜನರನ್ನ ಸಂಕಷ್ಟಕ್ಕೆ ದೂಡಿದೆ. ಆದರೂ ಕರ್ನಾಟಕದಲ್ಲಿ ಇನ್ನೂ ಮುಂದಿನ ಮೂರು ದಿನಗಳ ಕಾಲ ಅಂದರೆ ಮೇ 30ರವರೆಗೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಸೇರಿ 11 ಜಿಲ್ಲೆಗಳಿಗೆ ರೆಡ್‌ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಬಾಗಲಕೋಟೆ, ಯಾದಗಿರಿ, ಹಾವೇರಿ, ಗದಗ, ಹಾಸನದಲ್ಲಿ ಯಲ್ಲೋ ಅಲರ್ಟ್ ಇದ್ದರೆ, ಬೆಳಗಾವಿ, ಕಲಬುರಗಿ, ವಿಜಯಪುರ, ಬೀದ‌ರ್​ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೆಂಗಳೂರು ನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ. ಮುಂದಿನ ದಿನಗಳಲ್ಲಿ ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವುದನ್ನು ಹವಾಮಾನ ಇಲಾಖೆ ವಿಜ್ಞಾನಿ ಸಿ.ಎಸ್.ಪಾಟೀಲ್ ಅವರು ವಿವರಿಸಿದ್ದಾರೆ.

Published on: May 29, 2025 05:27 PM