Bengaluru rains :ಬೆಂಗಳೂರಿನಲ್ಲಿ ಮತ್ತೆ ವರುಣನ ಆರ್ಭಟ; ಲಾಲ್ ಬಾಗ್ ರಸ್ತೆಗೆ ಉರುಳಿ ಬಿದ್ದ ಬೃಹದಾಕಾರದ ಮರ!
ರಾಜ್ಯದಲ್ಲಿ ವರುಣನ ಆರ್ಭಟ ಮತ್ತೆ ಶುರುವಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಹವಾಮಾನ ಇಲಾಖೆ ಹಲವಾರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಿದೆ. ಮುಂದಿನ 2 ದಿನಗಳವರೆಗೂ ಬೆಂಗಳುರಿನಲ್ಬುಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬುಧವಾರ ರಾತ್ರಿ ಸುರಿದ ಮಳೆಯಿಂದಾಗಿ ಬೆಂಗಳೂರಿನ ಲಾಲ್ ಬಾಗ್ ರಸ್ತೆಯಲ್ಲಿ ಮರವೊಂದು ಉರುಳಿ ಬಿದ್ದಿದೆ.
ಬೆಂಗಳೂರು, ಸೆಪ್ಟೆಂಬರ್ 18 : ಬೆಂಗಳೂರಿನ ಕೆ. ಆರ್ ಪೇಟೆ, ಲಾಲ್ ಬಾಗ್ ಸೇರಿದಂತೆ ಬುಧವಾರ ರಾತ್ರಿ ಭಾರೀ ಮಳೆ ಸುರಿದಿದೆ. ಇದರ ಪರಿಣಾಮವಾಗಿ ಲಾಲ್ ಬಾಗ್ ರಸ್ತೆಯಲ್ಲಿ ಮರವೊಂದು ಉರುಳಿ ಬಿದ್ದಿದೆ. ಅರ್ಧಕ್ಕಿಂತ ಹೆಚ್ಚು ರಸ್ತೆಭಾಗ ಬಿದ್ದ ಮರದಿಂದ ಆವೃತವಾಗಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಬೆಂಗಳೂರಿನಲ್ಲಿ ಮುಂದಿನ 2 ದಿನಗಳ ಕಾಲ ವರುಣನ ಆರ್ಭಟ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಹಲವಾರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಿದೆ. ಸೆಪ್ಟೆಂಬರ್ 24ರವರೆಗೂ ಬೆಂಗಳೂರು ಸೇರಿ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Latest Videos
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ

