Video: ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ

Updated on: Dec 19, 2025 | 7:07 AM

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಥಾಣೆಯ ಘೋಡ್‌ಬಂದರ್ ಪ್ರದೇಶದ ಮದುವೆ ಮಂಟಪದಲ್ಲಿ ಗುರುವಾರ ನಡೆದ ಸಮಾರಂಭದ ವೇಳೆ ಬೆಂಕಿ ಕಾಣಿಸಿಕೊಂಡಿತ್ತು.ತಕ್ಷಣವೇ ಮಾಹಿತಿ ತಿಳಿದು, ಥಾಣೆ ಅಗ್ನಿಶಾಮಕ ದಳದ ಹಲವಾರು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿ, ಬೆಂಕಿಯನ್ನು ನಂದಿಸಲು ತೀವ್ರ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು.

ಮುಂಬೈ, ಡಿಸೆಂಬರ್ 19: ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಥಾಣೆಯ ಘೋಡ್‌ಬಂದರ್ ಪ್ರದೇಶದ ಮದುವೆ ಮಂಟಪದಲ್ಲಿ ಗುರುವಾರ ನಡೆದ ಸಮಾರಂಭದ ವೇಳೆ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣವೇ ಮಾಹಿತಿ ತಿಳಿದು, ಹಲವು ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ದೌಡಾಯಿಸಿದ್ದವು.  ಅಗ್ನಿ ಶಾಮಕ ಸಿಬ್ಬಂದಿ, ಬೆಂಕಿಯನ್ನು ನಂದಿಸಲು ತೀವ್ರ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು.

ಬೆಂಕಿಯ ತೀವ್ರತೆ ಹೆಚ್ಚಾಗುವ ಮೊದಲೇ ವಧು, ವರ ಮತ್ತು ಅತಿಥಿಗಳು ಸೇರಿದಂತೆ ಎಲ್ಲರನ್ನು ಸುರಕ್ಷಿತವಾಗಿ ಹೊರಗೆ ಕರೆತರಲಾಯಿತು. ಪ್ರಾಥಮಿಕ ವರದಿಗಳು ಯಾವುದೇ ಜೀವಹಾನಿ ಅಥವಾ ಗಾಯಗಳಾಗಿಲ್ಲ ಎಂದು ದೃಢಪಡಿಸಿವೆ. ಇದರಿಂದಾಗಿ ಸಂಭಾವ್ಯ ದುರಂತ ತಪ್ಪಿದೆ. ಶಾರ್ಟ್​ ಸರ್ಕ್ಯೂಟ್​ನಿಂದ ಬೆಮಕಿ ಹೊತ್ತಿಕೊಂಡಿರಬಹುದು ಎನ್ನಲಾಗಿದೆ. ಇತ್ತೀಚೆಗೆ ಗೋವಾದ ನೈಟ್​ಕ್ಲಬ್​ನಲ್ಲಿ ನಡೆದ ಅಗ್ನಿ ದುರಂತದಲ್ಲಿ 25 ಮಂದಿ ಪ್ರಾಣ ಕಳೆದುಕೊಂಡಿದ್ದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ