New Year 2025: ಗುಡ್ಬೈ 2024: ವೆಲ್ಕಮ್ 2025, ಜನರ ಜೋಶ್ ನೋಡಿ
ಬೆಂಗಳೂರಿನಲ್ಲಿ 2025ರ ಹೊಸ ವರ್ಷದ ಆಚರಣೆ ಅದ್ಭುತವಾಗಿತ್ತು. ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಮುಂತಾದ ಪ್ರದೇಶಗಳಲ್ಲಿ ಸಂಭ್ರಮದ ವಾತಾವರಣ ಮನೆಮಾಡಿದೆ. ಪೊಲೀಸರು ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಹಲವು ನಗರಗಳಲ್ಲಿ ಹೊಸ ವರ್ಷವನ್ನು ಸಂಭ್ರಮದಿಂದ ಬರಮಾಡಿಕೊಳ್ಳಲಾಗಿದೆ.
ಬೆಂಗಳೂರು, ಜನವರಿ 01: ನಗರದಲ್ಲಿ ಹೊಸ ವರ್ಷ 2025ಕ್ಕೆ (New Year) ಅದ್ಧೂರಿಯಾಗಿ ಸ್ವಾಗತ ಕೋರಲಾಗಿದೆ. ಯುವ ಸಮೂಹ 2024ಕ್ಕೆ ವಿದಾಯ ಹೇಳಿ, 2025ನ್ನು ಸ್ವಾಗತಿಸಿದೆ. M.G.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಕೋರಮಂಗಲ, ಇಂದಿರಾನಗರ, ಎಲೆಕ್ಟ್ರಾನಿಕ್ ಸಿಟಿಯಲ್ಲಿ ಹೊಸ ವರ್ಷಾಚರಣೆ ಜೋರಾಗಿದ್ದು, ಕೇಕ್ ಕತ್ತರಿಸಿ, ಪರಸ್ಪರ ಶುಭಾಶಯ ಕೋರಿದ್ದಾರೆ. ಯುವಕ ಯುವತಿಯರು ಕುಣಿದು ಕುಪ್ಪಳಿಸಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.