AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ’: ಶಾಸಕರ ಎದುರು ಮಹಿಳೆಯರ ಅಳಲು

‘ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ’: ಶಾಸಕರ ಎದುರು ಮಹಿಳೆಯರ ಅಳಲು

ಹರೀಶ್ ಜಿ.ಆರ್​.
| Edited By: |

Updated on: Sep 21, 2026 | 5:14 PM

Share

ತುಮಕೂರು ಮತ್ತು ಚಿಕ್ಕನಾಯಕನಹಳ್ಳಿ ಭಾಗದಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಟನಲ್ ನಿರ್ಮಾಣದಿಂದ ಅಂತರ್ಜಲ ಕುಸಿತವಾಗಿ ಕುಡಿಯುವ ನೀರಿಗೂ ತತ್ವಾರ ಉಂಟಾಗಿದೆ. ಇದರಿಂದ ಆಕ್ರೋಶಗೊಂಡ ಮಹಿಳೆಯರು ಕಾಮಗಾರಿ ನಿಲ್ಲಿಸುವಂತೆ ಮತ್ತು ತಮ್ಮ ಕೆರೆಗಳಿಗೆ ನೀರು ಒದಗಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಬಂದಿರುವ ಅವರು, ತಮ್ಮ ಅಸ್ತಿತ್ವಕ್ಕೇ ಕುತ್ತು ಬಂದಿದೆ ಎಂದು ನೋವು ತೋಡಿಕೊಂಡಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್​ 21: ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಯ ಕಾಮಗಾರಿಯ ಭಾಗವಾಗಿ ಚಿಕ್ಕನಾಯಕನಹಳ್ಳಿ ತಾಲೂಕಿನ ತಿಮ್ಮನಹಳ್ಳಿ ಗ್ರಾಮದ ಬಳಿ ಗುಡ್ಡ ಕೊರೆದು ಟನಲ್ ನಿರ್ಮಿಸುತ್ತಿರುವುದರಿಂದ ಅಂತರ್ಜಲ ಕುಸಿತಗೊಂಡು ಗ್ರಾಮದಲ್ಲಿ ಕುಡಿಯುವ ನೀರಿಗೂ ತತ್ವಾರ ಉಂಟಾಗಿದೆ ಎಂದು ಸ್ಥಳೀಯ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು. ಕೆರೆಗೆ ನೀರು ಒದಗಿಸುವಂತೆ ಒತ್ತಾಯಿಸಿ ಶಿರಾ ಶಾಸಕ ಟಿ.ಬಿ. ಜಯಚಂದ್ರ ಅವರಿಗೆ ಮನವಿ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಟಿ.ಬಿ. ಜಯಚಂದ್ರ, ‘ಈ ಹಿಂದೆ ನಾನು ಕಾನೂನು ಸಚಿವರಾಗಿದ್ದಾಗ ಆರಂಭವಾದ ಈ ಕಾಮಗಾರಿಗೆ ಹಣಕಾಸಿನ ಮುಗ್ಗಟ್ಟು ಎದುರಾಗಿದ್ದು, ಕೇಂದ್ರ ಸರ್ಕಾರ ಸುಮಾರು 6,000 ಕೋಟಿ ರೂ ಅನುದಾನ ಬಿಡುಗಡೆ ಮಾಡಿದರೆ ಕಾಮಗಾರಿ ಶೀಘ್ರ ಪೂರ್ಣಗೊಳ್ಳಲಿದೆ ಎಂದರು. ಈ ವೇಳೆ ಮಾಧ್ಯಮಗಳ ಮುಂದೆ ಕಣ್ಣೀರಿಟ್ಟ ಮಹಿಳೆಯರು, 1,000 ಅಡಿ ಕೊರೆದರೂ ಬೋರ್‌ವೆಲ್‌ಗಳಲ್ಲಿ ನೀರು ಸಿಗುತ್ತಿಲ್ಲ, ಟ್ಯಾಂಕರ್ ನೀರಿಗೂ 1,000 ರೂ ನೀಡಬೇಕಾದ ದುಃಸ್ಥಿತಿ ಬಂದಿದೆ. ಅಗತ್ಯ ಬಿದ್ದರೆ ನಮ್ಮ ಮಾಂಗಲ್ಯ ಮಾರಿ ಹಣ ನೀಡುತ್ತೇವೆ, ಆದರೆ ಮೊದಲು ಗ್ರಾಮಕ್ಕೆ ನೀರು ಕಲ್ಪಿಸಿ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More