ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

Updated on: Apr 23, 2026 | 9:08 PM

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೌರಾದಲ್ಲಿ ಬೃಹತ್ ರೋಡ್ ಶೋ ನಡೆಸಿದರು. ಅವರಿಗೆ ಅಭೂತಪೂರ್ವ ಸ್ವಾಗತ ನೀಡಲಾಯಿತು. ಪ್ರಧಾನಿ ಮೋದಿಯವರ ಮುಖವಿರುವ ಮಾಸ್ಕ್ ಧರಿಸಿದ್ದ ಜನರು ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಇದಕ್ಕೂ ಮುನ್ನ ಮಥುರಾಪುರದಲ್ಲಿ ನಡೆದ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಟಿಎಂಸಿ ಬಂಗಾಳದ ಮಹಿಳೆಯರ ಹಕ್ಕುಗಳನ್ನು ಕಸಿದುಕೊಂಡಿದೆ ಎಂದು ಆರೋಪಿಸಿದರು.

ಹೌರಾ, ಏಪ್ರಿಲ್ 23: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಚುನಾವಣಾ ಪ್ರಚಾರದ ಸಲುವಾಗಿ ಇಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಬಂಗಾಳದ ಹೌರಾದಲ್ಲಿ ಬೃಹತ್ ರೋಡ್ ಶೋ ನಡೆಸಿದರು. ಬಿಜೆಪಿ ಅಭ್ಯರ್ಥಿಗಳ ಜೊತೆ ರೋಡ್ ಶೋ ನಡೆಸಿದ ಮೋದಿಯವರನ್ನು ನೋಡಲು ಜನಸಾಗರವೇ ನೆರೆದಿತ್ತು. ಈ ವೇಳೆ ಪ್ರಧಾನಿ ಮೋದಿಯವರ ಮುಖವಿರುವ ಮಾಸ್ಕ್ ಧರಿಸಿದ್ದ ಜನರು ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಇದಕ್ಕೂ ಮುನ್ನ ಮಥುರಾಪುರದಲ್ಲಿ ನಡೆದ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಟಿಎಂಸಿ ಬಂಗಾಳದ ಮಹಿಳೆಯರ ಹಕ್ಕುಗಳನ್ನು ಕಸಿದುಕೊಂಡಿದೆ ಎಂದು ಆರೋಪಿಸಿದರು.

‘ಭಾರತ್ ಮಾತಾ ಕಿ ಜೈ’, ‘ಜೈ ಶ್ರೀರಾಮ್’ ಮತ್ತು ಬಿಜೆಪಿಯ ಪಶ್ಚಿಮ ಬಂಗಾಳ ಚುನಾವಣಾ ಘೋಷಣೆಯಾದ ‘ಪಲ್ಟಾನೋ ದರ್ಕಾರ್, ತೈ ಬಿಜೆಪಿ ಸರ್ಕಾರ್’ (ಬದಲಾವಣೆ ತರಲು ಬಿಜೆಪಿ ಸರ್ಕಾರ ಬೇಕು) ಘೋಷಣೆಗಳ ನಡುವೆ ಕೇಸರಿ ಬಣ್ಣದ ಟ್ರಕ್‌ನ ಮೇಲಿನಿಂದ ಪ್ರಧಾನಿ ಮೋದಿ ಜನಸಮೂಹದತ್ತ ಕೈ ಬೀಸಿದರು. ಸಾವಿರಾರು ಜನರು ಬೀದಿಗಳಲ್ಲಿ ಸಾಲುಗಟ್ಟಿ ನಿಂತಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More