Mamata Banerjee: ಒಡಿಶಾ ರೈಲು ದುರಂತ ನಡೆದ ಸ್ಥಳಕ್ಕೆ ಹೆಲಿಕಾಪ್ಟರ್ ನಲ್ಲಿ ಆಗಮಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ

ಅರುಣ್​ ಕುಮಾರ್​ ಬೆಳ್ಳಿ

Updated on: Jun 03, 2023 | 1:33 PM

ಅವರು ಪಯಣಿಸುತ್ತಿದ್ದ ಚಾಪರ್ ನಿಂದ ಸೆರೆಹಿಡಿದ ಕೆಲ ದೃಶ್ಯಗಳನ್ನು ವಿಡಿಯೋದಲ್ಲಿ ನೋಡಬಹುದು.

ಕೊಲ್ಕತ್ತಾ: ಒಡಿಶಾದ ಬಹನಾಗ ರೇಲ್ವೇ ನಿಲ್ದಾಣದ ಬಳಿ ಜರುಗಿದ ರೈಲು ದುರಂತ ರಾಷ್ಟ್ರ ಮತ್ತು ವಿವಿಧ ರಾಜ್ಯಗಳ ನಾಯಕರಲ್ಲಿ ಕಳವಳ ಉಂಟುಮಾಡಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಇಷ್ಟರಲ್ಲೇ ಬಲಾಸೋರ್ ಗೆ ಆಗಮಿಸಲಿದ್ದಾರೆ. ಏತನ್ಮಧ್ಯೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ (Mamata Banerjee) ಹೆಲಿಕಾಪ್ಟರ್ ಒಂದರಲ್ಲಿ ದುರಂತ ನಡೆದ (accident site) ಸ್ಥಳಕ್ಕೆ ಹೋದರು. ಅವರು ಪಯಣಿಸುತ್ತಿದ್ದ ಚಾಪರ್ ನಿಂದ ಸೆರೆಹಿಡಿದ ಕೆಲ ದೃಶ್ಯಗಳನ್ನು ವಿಡಿಯೋದಲ್ಲಿ ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.