AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಾಳದಲ್ಲಿ ಭುಗಿಲೆದ್ದ ಗಲಭೆ; ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ

ಬಂಗಾಳದಲ್ಲಿ ಭುಗಿಲೆದ್ದ ಗಲಭೆ; ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ

ಸುಷ್ಮಾ ಚಕ್ರೆ
|

Updated on: Apr 23, 2026 | 6:15 PM

Share

ಪಶ್ಚಿಮ ಬಂಗಾಳದಲ್ಲಿ ನಡೆದ ರಾಜ್ಯ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನದ ಸಮಯದಲ್ಲಿ ದಕ್ಷಿಣ ದಿನಾಜ್‌ಪುರದ ಬಿಜೆಪಿ ಅಭ್ಯರ್ಥಿ ಸುವೇಂದು ಸರ್ಕಾರ್ ಅವರ ಮೇಲೆ ಹಲವಾರು ಟಿಎಂಸಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಈ ಘಟನೆಯ ವೈರಲ್ ವೀಡಿಯೊದಲ್ಲಿ, ಭದ್ರತಾ ಸಿಬ್ಬಂದಿಯೊಬ್ಬರು ಬಿಜೆಪಿ ಅಭ್ಯರ್ಥಿಯನ್ನು ರಕ್ಷಿಸಲು ಪ್ರಯತ್ನಿಸುತ್ತಿರುವಾಗ ಟಿಎಂಸಿ ಕಾರ್ಯಕರ್ತರು ಸರ್ಕಾರ್ ಅವರನ್ನು ಗದರಿಸುತ್ತಿರುವುದನ್ನು ಕಾಣಬಹುದು.

ಕೊಲ್ಕತ್ತಾ, ಏಪ್ರಿಲ್ 23: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ (West Bengal Assembly Elections) ಮೊದಲ ಹಂತದ ಮತದಾನ ಇಂದು ನಡೆಯುತ್ತಿದೆ. ಬಂಗಾಳದ ದಕ್ಷಿಣ ದಿನಾಜ್‌ಪುರದ ಬಿಜೆಪಿ ಅಭ್ಯರ್ಥಿ ಸುವೇಂದು ಸರ್ಕಾರ್ ಅವರನ್ನು ಟಿಎಂಸಿ ಕಾರ್ಯಕರ್ತರು ಬೆನ್ನಟ್ಟಿ ಹಲ್ಲೆ ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಹಲ್ಲೆಯಿಂದ ತಪ್ಪಿಸಿಕೊಳ್ಳಲು ಸುವೇಂದು ಸರ್ಕಾರ್ ಪೊಲೀಸರ ಜೊತೆ ಮೈದಾನದೊಳಗೆ ಓಡಿದ್ದಾರೆ. ಭದ್ರತಾ ಸಿಬ್ಬಂದಿಯೊಬ್ಬರು ಬಿಜೆಪಿ ಅಭ್ಯರ್ಥಿಯನ್ನು ರಕ್ಷಿಸಲು ಪ್ರಯತ್ನಿಸುತ್ತಿರುವಾಗ ಟಿಎಂಸಿ ಕಾರ್ಯಕರ್ತರು ಸುವೇಂದು ಸರ್ಕಾರ್ ಅವರನ್ನು ಗದರಿಸುತ್ತಾ, ಹಲ್ಲೆ ಮಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಮತಗಟ್ಟೆಗೆ ತೆರಳುತ್ತಿದ್ದ ಸುವೇಂದು ಸರ್ಕಾರ್ ಅವರನ್ನು ತಡೆದು ಹಲ್ಲೆ ನಡೆಸಲಾಗಿದೆ. ಈ ಹಲ್ಲೆಯಿಂದ ಪಾರಾಗಲು ಅವರು ಹೊಲದಲ್ಲಿ ಓಡಿದ್ದಾರೆ. ಆದರೂ ಬೆನ್ನಟ್ಟಿ ಬಂದ ಜನರು ಅವರ ಮೇಲೆ ದಾಳಿ ನಡೆಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us