ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ: BJP ಶಾಸಕಿ ರತ್ನ ದೇವನಾಥ್ ಮನೆ ಬಳಿಯೇ ಬಾಂಬ್ ಸ್ಫೋಟ
ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣಾ ಫಲಿತಾಂಶದ ಬಳಿಕ ಹಿಂಸಾಚಾರ ತೀವ್ರಗೊಂಡಿದೆ. ಆರ್.ಜಿ ಕರ್ ಆಸ್ಪತ್ರೆಯಲ್ಲಿನ ಅತ್ಯಾಚಾರ ಸಂತ್ರಸ್ತೆ ತಾಯಿ, ಪಾನಿಹಾಟಿ ಬಿಜೆಪಿ ಶಾಸಕಿ ರತ್ನ ದೇವನಾಥ್ ಮನೆ ಬಳಿ ಬಾಂಬ್ ಸ್ಫೋಟಗೊಂಡಿರೋದು ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಘಟನೆಯಲ್ಲಿ ಐವರು ಬಿಜೆಪಿ ಕಾರ್ಯಕರ್ತರಿಗೆ ಗಾಯಗಳಾಗಿದ್ದು, ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕನನ್ನೂ ಗುಂಡಿಕ್ಕಿ ಕೊಂದಿರುವ ಘಟನೆ ಕೂಡ ದೇಶಾದ್ಯಂತ ಸುದ್ದಿಯಾಗಿದೆ.
ಕೋಲ್ಕತ್ತಾ, ಮೇ 07: ಚುನಾವಣಾ ಫಲಿತಾಂಶದ ಬೆನ್ನಲ್ಲೇ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ತೀವ್ರಗೊಂಡಿದ್ದು, ಪಾನಿಹಾಟಿ ಕ್ಷೇತ್ರದ ಬಿಜೆಪಿ ಶಾಸಕಿ ರತ್ನ ದೇವನಾಥ್ ನಿವಾಸದ ಬಳಿ ಬಾಂಬ್ ಸ್ಫೋಟಗೊಂಡಿದೆ. ಆರ್.ಜಿ ಕರ್ ಆಸ್ಪತ್ರೆಯಲ್ಲಿನ ಅತ್ಯಾಚಾರ ಸಂತ್ರಸ್ತೆ ತಾಯಿ ರತ್ನ ದೇವನಾಥ್ ಮನೆ ಸಮೀಪ ನಡೆದ ಈ ಘಟನೆಯಲ್ಲಿ ಬಿಜೆಪಿಯ ಐವರು ಕಾರ್ಯಕರ್ತರಿಗೆ ಗಾಯಗಳಾಗಿವೆ. ಬಿಜೆಪಿ ನಾಯಕ ಹಾಗೂ ಸಿಎಂ ರೇಸ್ನಲ್ಲಿರುವ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿರುವ ವಿಚಾರ ದೇಶಾದ್ಯಂತ ಸುದ್ದಿಯಾಗಿರುವ ನಡುವೆ, ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
