AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಮನಬಂದಂತೆ ಥಳಿತ; ಬಂಗಾಳದ ಶಾಕಿಂಗ್ ವಿಡಿಯೋ ವೈರಲ್

ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಮನಬಂದಂತೆ ಥಳಿತ; ಬಂಗಾಳದ ಶಾಕಿಂಗ್ ವಿಡಿಯೋ ವೈರಲ್

ಸುಷ್ಮಾ ಚಕ್ರೆ
|

Updated on:Jul 01, 2024 | 3:33 PM

Viral Video: ಪಶ್ಚಿಮ ಬಂಗಾಳದಲ್ಲಿ ನಡೆದ ಹಿಂಸಾಚಾರದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಬಂಗಾಳದ ಟಿಎಂಸಿ ಮುಖಂಡನೊಬ್ಬ ಮಹಿಳೆ ಮತ್ತು ಪುರುಷರಿಗೆ ನಡು ರಸ್ತೆಯಲ್ಲೇ ಕೋಲಿನಿಂದ ಮನಬಂದಂತೆ ಥಳಿಸುತ್ತಿರುವ ವಿಡಿಯೋವೊಂದು ಭಾರೀ ವೈರಲ್ ಆಗಿದೆ.

ಪಶ್ಚಿಮ ಬಂಗಾಳದಲ್ಲಿ ನಡೆದಿರುವ ಆಘಾತಕಾರಿ ಘಟನೆಯ ವಿಡಿಯೋವೊಂದು ವೈರಲ್ ಆಗಿದ್ದು, ಟಿಎಂಸಿ ನಾಯಕನೊಬ್ಬ ಪುರುಷ- ಮಹಿಳೆಗೆ ನಡುರಸ್ತೆಯಲ್ಲೇ ಥಳಿಸಿರುವ ಘಟನೆ ನಡೆದಿದೆ. ಈ ಆಘಾತಕಾರಿ ಘಟನೆಯಲ್ಲಿ, ಮಹಿಳೆ ಮತ್ತು ಪುರುಷನನ್ನು ಥಳಿಸುತ್ತಿರುವುದನ್ನು ಚಿತ್ರಿಸುವ ವೀಡಿಯೊದ ಕುರಿತು ಪಶ್ಚಿಮ ಬಂಗಾಳದ ಪ್ರತಿಪಕ್ಷಗಳು ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷವನ್ನು ಖಂಡಿಸಿದೆ.

ಮಹಿಳೆಯೊಬ್ಬರು ಮುಖ್ಯಮಂತ್ರಿಯಾಗಿರುವ ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯ ಚೋಪ್ರಾದಲ್ಲಿ ಟಿಎಂಸಿ ಕಾರ್ಯಕರ್ತರೊಬ್ಬರು ಇಬ್ಬರು ವ್ಯಕ್ತಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಮಮತಾ ಬ್ಯಾನರ್ಜಿಯವರ ಸರ್ಕಾರ ಅಧಿಕಾರದಲ್ಲಿರುವ ರಾಜ್ಯದಲ್ಲೇ ಮಹಿಳೆಗೆ ಸುರಕ್ಷತೆಯಿಲ್ಲ ಎಂದು ಬಿಜೆಪಿ ಮತ್ತು ಸಿಪಿಐಎಂ ಆರೋಪಿಸಿದೆ.

ಅಕ್ರಮ ಸಂಬಂಧ ಹೊಂದಿದ್ದಾರೆ ಎಂಬ ಆರೋಪದಲ್ಲಿ ಪುರುಷ ಮತ್ತು ಮಹಿಳೆಯನ್ನು ರಸ್ತೆಯಲ್ಲಿ ಜನರೆಲ್ಲರ ಎದುರೇ ನೆಲಕ್ಕೆ ಹಾಕಿ ಥಳಿಸಲಾಗಿದೆ. ಆದರೆ, ಈ ಆರೋಪವನ್ನು ಹಲ್ಲೆಗೊಳಗಾದವರು ತಳ್ಳಿ ಹಾಕಿದ್ದಾರೆ. ಆ ಮಹಿಳೆಯ ಮೇಲಿನ ಹಲ್ಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jul 01, 2024 03:30 PM