171 ರನ್ ಗಳಿಸಿದ ಪಾಕಿಸ್ತಾನ್: 184 ರನ್ ಚೇಸ್ ಮಾಡಿ ಗೆದ್ದ ವೆಸ್ಟ್ ಇಂಡೀಸ್
WI vs PAK: ರೋಸ್ಟನ್ ಚೇಸ್ ಅಜೇಯ 49 ರನ್ ಬಾರಿಸುವ ಮೂಲಕ 33.2 ಓವರ್ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿದರು. ಈ ಮೂಲಕ ವೆಸ್ಟ್ ಇಂಡೀಸ್ ತಂಡವು ದ್ವಿತೀಯ ಏಕದಿನ ಪಂದ್ಯದಲ್ಲಿ 5 ವಿಕೆಟ್ಗಳ ಜಯ ಸಾಧಿಸಿದೆ. ಇದಕ್ಕೂ ಮುನ್ನ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಗೆಲುವು ದಾಖಲಿಸಿತ್ತು. ಇದೀಗ ಮೂರನೇ ಏಕದಿನ ಪಂದ್ಯವು ಫೈನಲ್ ಫೈಟ್ ಆಗಿ ಮಾರ್ಪಟ್ಟಿದೆ.
ಟ್ರಿನಿಡಾಡ್ನ ಬ್ರಿಯಾನ್ ಲಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ದ್ವಿತೀಯ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡದ ನಾಯಕ ಶಾಯ್ ಹೋಪ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 37 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 171 ರನ್ ಕಲೆಹಾಕಿದ್ದರು. ಈ ವೇಳೆ ಮಳೆ ಬಂದಿದ್ದರಿಂದ ಪಂದ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು.
ಇನ್ನು ಮಳೆ ನಿಂತ ಬಳಿಕ ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ ವೆಸ್ಟ್ ಇಂಡೀಸ್ ತಂಡಕ್ಕೆ 35 ಓವರ್ಗಳಲ್ಲಿ 184 ರನ್ಗಳ ಗುರಿ ನೀಡಲಾಗಿದೆ. ಅದರಂತೆ 210 ಎಸೆತಗಳಲ್ಲಿ 184 ರನ್ಗಳ ಗುರಿ ಪಡೆದ ವಿಂಡೀಸ್ ಪರ ನಾಯಕ ಶಾಯ್ ಹೋಪ್ 32 ರನ್ ಬಾರಿಸಿದರು. ಆ ಬಳಿಕ ಬಂದ ಶೆರ್ಫೇನ್ ರದರ್ಫೋರ್ಡ್ 45 ರನ್ ಗಳಿಸಿದರು.
ಆರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರೋಸ್ಟನ್ ಚೇಸ್ ಅಜೇಯ 49 ರನ್ ಬಾರಿಸುವ ಮೂಲಕ 33.2 ಓವರ್ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿದರು. ಈ ಮೂಲಕ ವೆಸ್ಟ್ ಇಂಡೀಸ್ ತಂಡವು ದ್ವಿತೀಯ ಏಕದಿನ ಪಂದ್ಯದಲ್ಲಿ 5 ವಿಕೆಟ್ಗಳ ಜಯ ಸಾಧಿಸಿದೆ. ಇದಕ್ಕೂ ಮುನ್ನ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಗೆಲುವು ದಾಖಲಿಸಿತ್ತು. ಇದೀಗ ಮೂರನೇ ಏಕದಿನ ಪಂದ್ಯವು ಫೈನಲ್ ಫೈಟ್ ಆಗಿ ಮಾರ್ಪಟ್ಟಿದೆ.

