AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!

ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!

ಸಹದೇವ್​ ಮಾನೆ
| Edited By: |

Updated on: Jul 05, 2026 | 1:01 PM

Share

ಪಶ್ಚಿಮ ಘಟ್ಟ ಮತ್ತು ಕನಕುಂಬಿ ಭಾಗದಲ್ಲಿ ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯು ಮಲಪ್ರಭಾ ನದಿಗೆ ಜೀವಕಳೆ ತಂದಿದೆ. ನದಿ ಈಗ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಇದರ ಪರಿಣಾಮವಾಗಿ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹಬ್ಬನಟ್ಟಿ ಗ್ರಾಮದ ಹೊರವಲಯದಲ್ಲಿರುವ ಪುರಾತನ ಮಾರುತಿ ಮಂದಿರ ಭಾಗಶಃ ಜಲಾವೃತಗೊಂಡಿದೆ.

ಬೆಳಗಾವಿ, ಜುಲೈ 05: ಪಶ್ಚಿಮ ಘಟ್ಟ ಮತ್ತು ಕನಕುಂಬಿ ಭಾಗದಲ್ಲಿ ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯು ಮಲಪ್ರಭಾ ನದಿಗೆ ಜೀವಕಳೆ ತಂದಿದೆ. ನದಿ ಈಗ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಇದರ ಪರಿಣಾಮವಾಗಿ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹಬ್ಬನಟ್ಟಿ ಗ್ರಾಮದ ಹೊರವಲಯದಲ್ಲಿರುವ ಪುರಾತನ ಮಾರುತಿ ಮಂದಿರ ಭಾಗಶಃ ಜಲಾವೃತಗೊಂಡಿದೆ.

ಮಂದಿರದ ಗರ್ಭಗುಡಿ ಸೇರಿದಂತೆ ರಾಮ, ಲಕ್ಷ್ಮಣ, ಸೀತಾ ಮೂರ್ತಿಗಳು ಮತ್ತು ಶಿವನ ಮಂದಿರ ಕೂಡ ಈಗಾಗಲೇ ನೀರಿನಲ್ಲಿ ಮುಳುಗಿವೆ. ಪ್ರತಿ ವರ್ಷ ಮಳೆಗಾಲದಲ್ಲಿ ಈ ದೇವಾಲಯವು ಮುಳುಗಡೆಯಾಗುವುದು ಸಾಮಾನ್ಯವಾಗಿದ್ದು, ಕೆಲವೊಮ್ಮೆ ನಾಲ್ಕು ತಿಂಗಳ ಕಾಲ ನೀರಿನಲ್ಲೇ ನಿಂತಿರುತ್ತದೆ. ನಿರಂತರ ಮಳೆಯಿಂದಾಗಿ ದೇವಾಲಯ ಸಂಪೂರ್ಣವಾಗಿ ಮುಳುಗಡೆಯಾಗುವ ಸಾಧ್ಯತೆ ಇದೆ.

ಭಕ್ತರು ನೀರಿನಿಂದ ಜಲಾವೃತಗೊಂಡಿರುವ ದೇವರ ದರ್ಶನವನ್ನು ದೇವಾಲಯದ ಹೊರಭಾಗದಲ್ಲೇ ನಿಂತುಕೊಂಡು ಮಾಡುತ್ತಿದ್ದಾರೆ. ಈ ಮಳೆಯಿಂದಾಗಿ ರೈತರ ಮುಖದಲ್ಲಿ ಸಂತಸ ಮೂಡಿದೆ. ನದಿ ತಟದಲ್ಲಿರುವ ಜಮೀನುಗಳು ಮತ್ತು ಇತರ ದೇವಾಲಯಗಳು ಕೂಡ ಜಲಾವೃತಗೊಳ್ಳುತ್ತಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More