ನೂತನ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?

Edited By:

Updated on: Jun 21, 2026 | 3:50 PM

ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿ.ಕೆ. ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರ ಕಾರ್ಯವನ್ನು ಶ್ಲಾಘಿಸಿದರು. ಕೇಂದ್ರ ಸರ್ಕಾರದ ಬೆಲೆ ಏರಿಕೆ, ನಿರುದ್ಯೋಗ ನೀತಿಗಳನ್ನು ತೀವ್ರವಾಗಿ ಟೀಕಿಸಿದರು. ಮುಂಬರುವ ಸಂಸತ್ ಚುನಾವಣೆಗೆ ಸಜ್ಜಾಗಲು ಕರೆ ನೀಡಿದರು.

ಬೆಂಗಳೂರು, ಜೂನ್​​ 21: ರಾಜ್ಯ ಕಾಂಗ್ರೆಸ್​ಗೆ ಇಂದು ಮಹತ್ವದ ದಿನ. ಆರೂವರೆ ವರ್ಷ KPCC ಅಧ್ಯಕ್ಷರಾಗಿದ್ದ ಡಿಕೆ ಶಿವಕುಮಾರ್​ ಚುಕ್ಕಾಣಿ ಹಿಡಿದಿದ್ದರು. ಡಿಕೆ ಶಿವಕುಮಾರ್​ ಸಿಎಂ ಆದ ನಂತರ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಟ್ಟುಕೊಟ್ಟಿದ್ದಾರೆ. ಬಿ.ಕೆ. ಹರಿಪ್ರಸಾದ್ ಪಕ್ಷಕ್ಕೆ ಹೊಸಬರೇನಲ್ಲ. ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷಕ್ಕೆ ಸೇರಿ, ಹಲವು ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ನಗರದ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ಸಾಮಾನ್ಯ ಕಾರ್ಯಕರ್ತನಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬಂದಿದ್ದಾರೆ. ತಳಮಟ್ಟದಿಂದ ಬಂದ ಕಾರ್ಯಕರ್ತನನ್ನು ಕೆಪಿಸಿಸಿ ಅಧ್ಯಕ್ಷ ಮಾಡಿದ್ದೇವೆ. ಪಕ್ಷ ತತ್ವಗಳನ್ನು ಮೈಗೂಡಿಸಿಕೊಂಡವರಿಗೆ ಅಧಿಕಾರ ನೀಡಿದ್ದೇವೆ ಎಂದರು. ನಮ್ಮ ಮುಂದೆ ಅನೇಕ ದೊಡ್ಡ ಸಮಸ್ಯೆಗಳಿವೆ. ಅಗತ್ಯವಸ್ತುಗಳ ದರ ಏರಿಕೆ, ಹಣದುಬ್ಬರ ಸಮಸ್ಯೆಯಿದೆ. ಪೆಟ್ರೋಲ್, ಡೀಸೆಲ್, ಗ್ಯಾಸ್, ಪಠ್ಯ ಪುಸ್ತಕದ ದರ ಏರಿಕೆಯಾಗಿದೆ. ಬೆಲೆ ಏರಿಕೆ ವಿರುದ್ಧ ಹೋರಾಟದ ಹೊಣೆ ಬಿ.ಕೆ.ಹರಿಪ್ರಸಾದ್ ಮೇಲಿದೆ. ಬಿ.ಕೆ.ಹರಿಪ್ರಸಾದ್ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಬೇಕು ಎಂದು ಸಲಹೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

 

Published on: Jun 21, 2026 03:49 PM
Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More