Daily Devotional: ಕನಸಿನಲ್ಲಿ ಶಿವಲಿಂಗ ದರ್ಶನವಾದರೆ ಏನರ್ಥ, ಈ ವಿಡಿಯೋ ನೋಡಿ
ಹಿಂದೂ ಧರ್ಮದಲ್ಲಿ ಶೈವ ಪಂಥದವರು, ಶಿವನ ಆರಾಧಾಕರು ರುದ್ರಾಕ್ಷಿಯನ್ನು ಧರಿಸುವುದು ಹೆಚ್ಚು. ರುದ್ರಾಕ್ಷಿ ಶಿವನ ಪ್ರತಿರೂಪ ಎಂದು ನಂಬಲಾಗಿದೆ. ಈ ರುದ್ರಾಕ್ಷಿಯನ್ನು ಧರಿಸುವುದರಿಂದ ಏನೆಲ್ಲ ಉಪಯೋಗವಿದೆ? ರುದ್ರಾಕ್ಷಿ ಧಾರಣೆ ಹಿಂದಿನ ಆದ್ಯಾತ್ಮಿಕ ಮತ್ತು ವೈಜ್ಞಾನಿಕ ಕಾರಣವನ್ನು ಬಸವರಾಜ ಗುರೂಜಿ ತಿಳಿಸಿದ್ದಾರೆ.
ಹಿಂದೂ ಧರ್ಮದಲ್ಲಿ ಶೈವ ಪಂಥದವರು, ಶಿವನ ಆರಾಧಾಕರು ರುದ್ರಾಕ್ಷಿಯನ್ನು ಧರಿಸುವುದು ಹೆಚ್ಚು. ರುದ್ರಾಕ್ಷಿ ಶಿವನ ಪ್ರತಿರೂಪ ಎಂದು ನಂಬಲಾಗಿದೆ. ಪುರಾಣದ ಪ್ರಕಾರ ತ್ರಿಪುರಾಸುರ ರಾಕ್ಷಸನ ಸಂಹಾರದ ನಂತರ, ಪರಶಿವನ ಕಣ್ಣಿನಿಂದ ಬಂದ ಆನಂದದ ಅಶ್ರು ಬಿಂದುಗಳು ರುದ್ರಾಕ್ಷಿ ಮಣಿಗಳಾದವು. ಶಿವನಿಗೆ ಬಹಳ ಪ್ರಿಯವಾದ ರುದ್ರಾಕ್ಷಿ ಮಣಿಗಳು ಶಿವಭಕ್ತರ ಕೊರಳ ಮಣಿ-ಮಾಲೆಯಾಗಿ ಉಪಯೋಗಿಸಲ್ಪಡುತ್ತದೆ. ಇದನ್ನು ಜಪಮಾಲೆಯಾಗಿಯೂ ಉಪಯೋಗಿಸುತ್ತಾರೆ ಏಕ ಮುಖ ರುದ್ರಾಕ್ಷಿಯನ್ನು ಸಾಕ್ಷಾತ್ ಶಿವನ ಸ್ವರೂಪವೆಂದು ತಿಳಿಯುತ್ತಾರೆ. ದ್ವಿಮುಖ ಇದು ಶಿವ ಪಾರ್ವತಿ ಸ್ವರೂಪ ಎಂದು ಹೇಳುತ್ತಾರೆ ಈ ರುದ್ರಾಕ್ಷಿಯೂ ಸಿಗುವುದು ತುಂಬಾ ವಿರಳ. ಮೂರುಮುಖದ ರುದ್ರಾಕ್ಷಿ ಅಗ್ನಿ ದೇವನ ಸ್ವರೂಪ ಎಂದು ಹೇಳುತ್ತಾರೆ. ಇದನ್ನು ಬ್ರಹ್ಮ ಸ್ವರೂಪ ಎಂದು ಗುರುತಿಸುತ್ತಾರೆ. ಪಂಚ ಮುಖಿ ರುದ್ರಾಕ್ಷಿಯನ್ನು ಸ್ವಯಂ ಭಗವಾನ್ ಶಂಕರನ ಸ್ವರೂಪ ಎಂದು ತಿಳಿಯುತ್ತಾರೆ. ಸಾಮಾನ್ಯವಾಗಿ ಪಂಚ ಮುಖಿ ರುದ್ರಾಕ್ಷಿಗಳಿಂದ ಜಪಮಾಲೆ ಮಾಡುತ್ತಾರೆ. ಆರು ಮುಖದ ರುದ್ರಾಕ್ಷಿ ಶಿವ ಪುತ್ರ ಕುಮಾರ ಕಾರ್ತಿಕೇಯನ ರೂಪವೆಂದು ತಿಳಿಯಲಾಗುತ್ತದೆ. ಏಳು ಮುಖದ ರುದ್ರಾಕ್ಷಿ ಅನಂತ ನಾಗನ (ಅಥವಾ ಆದಿಶೇಷನ ) ಸ್ವರೂಪ ಎಂದು ಹೇಳುವರು.ಏಳು ಮುಖದ ರುದ್ರಾಕ್ಷಿ ಅನಂತ ನಾಗನ (ಅಥವಾ ಆದಿಶೇಷನ ) ಸ್ವರೂಪ ಎಂದು ಹೇಳುವರು.ಒಂಭತ್ತು ಮುಖದ ರುದ್ರಾಕ್ಷಿಯನ್ನು ಭೈರವ ಮತ್ತು ನವ ದುರ್ಗ ಸ್ವರೂಪ ಎಂದು ತಿಳಿಯಲಾಗುತ್ತದೆ. ಹತ್ತುಮುಖದ ರುದ್ರಾಕ್ಷಿ ಭಗವಾನ್ ನಾರಾಯಣನ ಸ್ವರೂಪವೆಂದು ನಂಬುಗೆ. ಹನ್ನೊಂದು ಮುಖದ ರುದ್ರಾಕ್ಷಿ ಪರಶಿವನ ರುದ್ರ ಸ್ವರೂಪ (ಏಕಾದಶ ರುದ್ರರು) ಎಂದು ಹೇಳುತ್ತಾರೆ. ಹನ್ನೆರಡು ಮುಖದ ರುದ್ರಾಕ್ಷಿ ಭಗವಾನ್ ಸೂರ್ಯನಾರಾಯಣನ ಸ್ವರೂಪವೆಂದು ತಿಳಿಯಲಾಗುತ್ತದೆ (ದ್ವಾದಶಾದಿತ್ಯರು). ಹದಿಮೂರು ಮುಖದ ರುದ್ರಾಕ್ಷಿ ಇಂದ್ರ ದೇವನ ಸ್ವರೂಪ ಎಂದು ಭಾವಿಸುತ್ತಾರೆ. ಹದಿನಾಲ್ಕು ಮುಖದ ರುದ್ರಾಕ್ಷಿ ಆಂಜನೇಯನ ಸ್ವರೂಪವೆಂದು ತಿಳಿಯಲಾಗುತ್ತದೆ. ಈ ರುದ್ರಾಕ್ಷಿಯನ್ನು ಧರಿಸುವುದರಿಂದ ಏನೆಲ್ಲ ಉಪಯೋಗವಿದೆ? ರುದ್ರಾಕ್ಷಿ ಧಾರಣೆ ಹಿಂದಿನ ಆದ್ಯಾತ್ಮಿಕ ಮತ್ತು ವೈಜ್ಞಾನಿಕ ಕಾರಣವನ್ನು ಬಸವರಾಜ ಗುರೂಜಿ ತಿಳಿಸಿದ್ದಾರೆ.