ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು: ವಿಡಿಯೋ ನೋಡಿ
ನಂದಿನಿ ಹಾಲಿನದರ ಹೆಚ್ಚು ಮಾಡುತ್ತೇವೆ. ಆದರೆ ಆ ಹೆಚ್ಚು ಮಾಡಿದ ಹಾಲಿನ ದರ ರೈತರಿಗೆ ಹೋಗಬೇಕು. ಈ ಬಗ್ಗೆ ಸಭೆ ಕರೆದು ಹಾಲಿನ ದರ ಹೆಚ್ಚು ಮಾಡೋಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆ ಮೂಲಕ ನಂದಿನಿ ಹಾಲಿನ ಗ್ರಾಹಕರಿಗೆ ಶಾಕ್ ಸರ್ಕಾರ ಶಾಕ್ ನೀಡಲು ಮುಂದಾಗಿದೆ.
ರಾಮನಗರ, ಸೆಪ್ಟೆಂಬರ್ 13: ಜಿಲ್ಲೆಯ ಮಾಗಡಿಯ ಹೊಸಪೇಟೆ ವೃತ್ತ ಬಳಿ ನಡೆದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ (Siddaramaiah), ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ವೇದಿಕೆಯಲ್ಲೇ ಘೋಷಿಸಿದ್ದಾರೆ. ಆ ಮೂಲಕ ರೈತರಿಗೆ ಖುಷಿ ಸುದ್ದಿ ನೀಡಿದರೆ ಇತ್ತ ಗ್ರಾಹಕರಿಗೆ ಮತ್ತೊಮ್ಮೆ ಶಾಕ್ ನೀಡಲು ಸರ್ಕಾರ ಮುಂದಾಗಿದೆ. ನಂದಿನಿ ಹಾಲಿನ ದರ ಹೆಚ್ಚಳ ಸಂಬಂಧ ಸಭೆ ಕರೆದು ಮಾತುಕತೆ ನಡೆಸಿ ಹಾಲಿನ ದರ ಹೆಚ್ಚಳ ಮಾಡೋಣ ಎಂದಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.