Darshan Arrest: ದರ್ಶನ್ ಬಂಧನ ಬಗ್ಗೆ ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ ಹೇಳಿದ್ದೇನು? ವಿಡಿಯೋ ನೋಡಿ

|

Updated on: Jun 11, 2024 | 11:56 AM

Bengaluru Police Commissioner B. Dayananda; ಚಿತ್ರದುರ್ಗದ ರೇಣುಕಸ್ವಾಮಿ ಎಂಬವರ ಕೊಲೆ ಪ್ರಕರಣದಲ್ಲಿ ಖ್ಯಾತ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ನಟ ದರ್ಶನ್ ಬಂಧನ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ಪತ್ರಿಕಾಗೋಷ್ಠಿ ಮೂಲಕ ಮಾಹಿತಿ ನೀಡಿದ್ದಾರೆ. ದರ್ಶನ್​ಗೂ ಕೊಲೆಗೂ ಏನು ಸಂಬಂಧ? ಸದ್ಯ ತನಿಖೆ ಯಾವ ಹಂತದಲ್ಲಿದೆ? ಪ್ರಕರಣದ ಬಗ್ಗೆ ಪೊಲೀಸ್ ಕಮಿಷನರ್ ಹೇಳಿಕೆ ಕೆಳಗಿನ ವಿಡಿಯೋದಲ್ಲಿದೆ ನೋಡಿ.

ಬೆಂಗಳೂರು, ಜೂನ್ 11: ಕೊಲೆ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಬಂಧನಕ್ಕೆ ಸಂಬಂಧಿಸಿ ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ (B Dayananda) ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಬೆಂಗಳೂರು ಪಶ್ಚಿಮ ವಿಭಾಗದ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜೂನ್ 9 ರಂದು ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ಚಿತ್ರರಂಗದ ನಟರೊಬ್ಬರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದ್ದು, ಪ್ರಕರಣದ ತನಿಖೆ ಪ್ರಗತಿಯಲ್ಲಿದೆ ಎಂದು ಅವರು ತಿಳಿಸಿದ್ದಾರೆ.

ಚಿತ್ರದುರ್ಗ ಮೂಲದ ರೇಣುಕಸ್ವಾಮಿ (33) ಕೊಲೆಯಾದ ವ್ಯಕ್ತಿ. ಪ್ರಕರಣ ಸಂಬಂಧ ಸುಮಾರು 10 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ತನಿಖೆಯ ಪ್ರಕ್ರಿಯೆಗಳು ನಡೆಯುತ್ತಿರುವ ಕಾರಣ ಹೆಚ್ಚಿನ ಮಾಹಿತಿಯನ್ನು ಈಗ ಕೊಡುವುದು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಹೆಚ್ಚಿನ ವಿವರ ಹಾಗೂ ಪೂರಕ ಮಾಹಿತಿಗಳನ್ನು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ಕೊಲೆ? ನಟ ದರ್ಶನ್ ಅರೆಸ್ಟ್

ದರ್ಶನ್ ಆಪ್ತೆ ಪವಿತ್ರಾ ಗೌಡಗೆ ಅಶ್ಲೀಲ ಮೇಸೆಜ್ ಮಾಡಿದ್ದರು ಎಂಬ ಆರೋಪದಲ್ಲಿ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವವರ ಹತ್ಯೆಯಾಗಿದೆ ಎಂಬುದು ಪ್ರಾಥಮಿಕ ತನಿಖೆಗಳಲ್ಲಿ ತಿಳಿದುಬಂದಿದೆ. ಸದ್ಯ ದರ್ಶನ್​ರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ