ಉಪಚುನಾವಣಾ ಫಲಿತಾಂಶದ ಬಗ್ಗೆ ಸಚಿವ ಜಮೀರ್​ ಎದುರು ಸಿಎಂ ಹೇಳಿದ್ದೇನು?

Edited By:

Updated on: Apr 16, 2026 | 10:42 PM

ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ, ಸಂಪುಟ ಪುನರ್‌ರಚನೆ ಗೊಂದಲದಿಂದ ದಾವಣಗೆರೆ ಉಪಚುನಾವಣೆ ಚರ್ಚೆಯ ನಡುವೆ ಸಚಿವ ಜಮೀರ್ ಅಹ್ಮದ್ ಅವರ ಸ್ಥಾನದ ಕುರಿತು ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಸಚಿವ ಸಂಪುಟ ಪುನರ್‌ರಚನೆಯಾದರೆ ಜಮೀರ್ ಕೈಬಿಡುವ ಸಾಧ್ಯತೆ ಇದೆ ಎಂಬ ಚರ್ಚೆಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಮೀರ್‌ಗೆ ಸಲಹೆ ನೀಡಿ, ಎರಡು ಕ್ಷೇತ್ರದಲ್ಲಿ ಗೆಲುವಿನ ಭವಿಷ್ಯ ನುಡಿದಿದ್ದಾರೆ.

ಬೆಂಗಳೂರು, ಏಪ್ರಿಲ್​ 16: ನಾಯಕತ್ವ ಬದಲಾವಣೆ ಮತ್ತು ಸಚಿವ ಸಂಪುಟ ಪುನರ್ ರಚನೆ ಗೊಂದಲದ ನಡುವೆ ದಾವಣಗೆರೆ ಉಪ ಚುನಾವಣೆಗೆ ಸಂಬಂಧ ರಾಜ್ಯ ಕಾಂಗ್ರೆಸ್​​ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಸಚಿವ ಜಮೀರ್ ಕೂಡ ಪ್ರಚಾರದಲ್ಲಿ ಭಾಗಿಯಾಗದ ಕಾರಣ ಮುಂದಿನ ಟಾರ್ಗೆಟ್ ಜಮೀರ್ ಎನ್ನಲಾಗ್ತಿದೆ. ಸಚಿವ ಸಂಪುಟ ಪುನಾರಚನೆಯಾದ್ರೆ ಜಮೀರ್ ಕೈ ಬಿಡ್ತಾರೆಂಬ ಚರ್ಚೆ ಕಾಂಗ್ರೆಸ್ ಮನೆಯಲ್ಲಿ ಸದ್ದು ಮಾಡುತ್ತಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಸಚಿವ ಜಮೀರ್​ ಅಹ್ಮದ್​ಗೆ ಸಲಹೆ ನೀಡಿದ್ದಾರೆ. ಬಳಿಕ ವಿಧಾನಸೌಧದ ಕೆಂಗಲ್ ಗೇಟ್‌ನಲ್ಲಿ ಸಚಿವ ಜಮೀರ್​​ ನಿಲ್ಲಿಸಿಕೊಂಡ ಸಿಎಂ ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಗೆಲುವಿನ ಭವಿಷ್ಯ ನುಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More