ಹಠಾತ್ SL ಭೈರಪ್ಪನವರಿಗೆ ಏನಾಯ್ತು? ನಿಧನಕ್ಕೆ ಕಾರಣ ಬಿಚ್ಚಿಟ್ಟ ಆಸ್ಪತ್ರೆ ವೈದ್ಯೆ
ಬೆಂಗಳೂರಿನ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಇಂದು ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ನಿಧನಹೊಂದಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಡಾಕ್ಟರ್ ಶೈಲಾ, ಅವರು 3 ತಿಂಗಳ ಹಿಂದೆ ಚಿಕಿತ್ಸೆ ಪಡೆದು ಗುಣಮುಖರಾಗಿ ತೆರಲಳಿದ್ದರು. ಈಗ 3 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾದ ಅವರು ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 24: ಬೆಂಗಳೂರಿನ ರಾಜಾಜಿನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಇಂದು ಎಸ್.ಎಲ್ ಭೈರಪ್ಪನವರು ಕೊನೆಯುಸಿರೆಳೆದಿದ್ದಾರೆ. ಅವರು 2 ತಿಂಗಳ ಹಿಂದೆ ಆಯುರ್ವೇದ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಸುಸ್ತು ಮತ್ತು ಕಾಲುನೋವಿನಿಂದ ಬಳಲುತ್ತಿದ್ದ ಅವರು ಕಳೆದ 3 ದಿನಗಳ ಹಿಂದೆ ಪುನಃ ಇದೇ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ, ಇಂದು(ಸೆಪ್ಟೆಂಬರ್) ಮಧ್ಯಾಹ್ನ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ‘ಅವರನ್ನು ಉಳಿಸಲು ಬಹಳ ಪ್ರಯತ್ನ ಪಟ್ಟೆವು . ಆದರೆ ಉಳಿಸಲು ಸಾಧ್ಯವಾಗಲಿಲ್ಲ’ ಎಂದು ರಾಷ್ಟ್ರೋತ್ಥಾನ ಆಸ್ಪತ್ರೆಯ ಡಾ. ಶೈಲಾ ತಿಳಿಸಿದ್ದಾರೆ.
Latest Videos

