ಹಠಾತ್ SL ಭೈರಪ್ಪನವರಿಗೆ ಏನಾಯ್ತು? ನಿಧನಕ್ಕೆ ಕಾರಣ ಬಿಚ್ಚಿಟ್ಟ ಆಸ್ಪತ್ರೆ ವೈದ್ಯೆ

Updated on: Sep 24, 2025 | 6:29 PM

ಬೆಂಗಳೂರಿನ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಇಂದು ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ನಿಧನಹೊಂದಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಡಾಕ್ಟರ್ ಶೈಲಾ, ಅವರು 3 ತಿಂಗಳ ಹಿಂದೆ ಚಿಕಿತ್ಸೆ ಪಡೆದು ಗುಣಮುಖರಾಗಿ ತೆರಲಳಿದ್ದರು. ಈಗ 3 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾದ ಅವರು ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್ 24: ಬೆಂಗಳೂರಿನ ರಾಜಾಜಿನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಇಂದು ಎಸ್.ಎಲ್ ಭೈರಪ್ಪನವರು ಕೊನೆಯುಸಿರೆಳೆದಿದ್ದಾರೆ. ಅವರು  2 ತಿಂಗಳ ಹಿಂದೆ ಆಯುರ್ವೇದ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಸುಸ್ತು ಮತ್ತು ಕಾಲುನೋವಿನಿಂದ ಬಳಲುತ್ತಿದ್ದ ಅವರು ಕಳೆದ 3 ದಿನಗಳ ಹಿಂದೆ  ಪುನಃ ಇದೇ ಆಸ್ಪತ್ರೆಗೆ ದಾಖಲಾಗಿದ್ದರು.  ಆದ್ರೆ, ಇಂದು(ಸೆಪ್ಟೆಂಬರ್) ಮಧ್ಯಾಹ್ನ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ‘ಅವರನ್ನು ಉಳಿಸಲು ಬಹಳ ಪ್ರಯತ್ನ ಪಟ್ಟೆವು . ಆದರೆ ಉಳಿಸಲು ಸಾಧ್ಯವಾಗಲಿಲ್ಲ’ ಎಂದು ರಾಷ್ಟ್ರೋತ್ಥಾನ ಆಸ್ಪತ್ರೆಯ ಡಾ. ಶೈಲಾ ತಿಳಿಸಿದ್ದಾರೆ.

 

Follow Us
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More