ರಸ್ತೆಯಲ್ಲಿ ಬಿದ್ದ ಮೀನುಗಳನ್ನು ಕವರ್ನಲ್ಲಿ ತುಂಬಿಕೊಳ್ಳಲು ಮುಗಿಬಿದ್ದ ಜನ
ಮೀನುಗಳಿದ್ದ ಲಾರಿ ಪಲ್ಟಿಯಾದ ಪರಿಣಾಮ ಮೀನುಗಳೆಲ್ಲ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು. ಇದನ್ನು ಕಂಡ ಜನರು ಕೈಗೆ ಸಿಕ್ಕಷ್ಟು ಮೀನುಗಳನ್ನು ಬಾಚಿಕೊಳ್ಳಲು ರಸ್ತೆಯಲ್ಲಿ ಮುಗಿಬಿದ್ದಿರುವ ದೃಶ್ಯ ವೈರಲ್ ಆಗಿದೆ. ಮೀನುಗಳನ್ನು ಹೊತ್ತು ಸಾಗುತ್ತಿದ್ದ ಲಾರಿ ವಾರಂಗಲ್ ಕಡೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.
ಮಹಬೂಬಾಬಾದ್ ಜಿಲ್ಲೆಯ ಮರಿಪೇಡಾದಲ್ಲಿ ಮೀನು ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಪಲ್ಟಿಯಾಗಿದೆ. ಖಮ್ಮಂನಿಂದ ವಾರಂಗಲ್ ಕಡೆಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಲಾರಿ ಪಲ್ಟಿಯಾಗಿ ಮೀನುಗಳೆಲ್ಲ ರಸ್ತೆಗೆ ಬಿದ್ದಿವೆ. ಇದರಿಂದ ಜನರು ಜೀವಂತ ಮೀನುಗಳನ್ನು ಬಾಚಿಕೊಳ್ಳಲು ಮುಗಿಬಿದ್ದಿದ್ದಾರೆ. ಈ ಘಟನೆಯಲ್ಲಿ ಒಬ್ಬರು ಗಾಯಗೊಂಡಿದ್ದಾರೆ. ಲಾರಿ ಪಲ್ಟಿಯಾಗಿ ಮೀನುಗಳೆಲ್ಲ ರಸ್ತೆಗೆ ಬಿದ್ದಿವೆ.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ