ಗ್ಯಾರಂಟಿ ಯೋಜನೆಗೆ ಅನುದಾನ ಬಳಸುವುದರಲ್ಲಿ ತಪ್ಪೇನು? ಸಚಿವ ಶಿವರಾಜ್ ತಂಗಡಗಿ
ಕೊಪ್ಪಳದಲ್ಲಿ ಸಚಿವ ಶಿವರಾಜ್ ತಂಗಡಗಿ ಅವರು ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿಇಪಿ-ಟಿಎಸ್‌ಪಿ ಅನುದಾನ ಬಳಕೆಯ ಆರೋಪಗಳಿಗೆ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿಯವರ ವಿರುದ್ಧ ವಾಗ್ದಾಳಿ ನಡೆಸಿ, ಅವರು ಬಡವರ ಕಾಳಜಿ ತೋರಿಲ್ಲ ಎಂದು ಆರೋಪಿಸಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುವುದಾಗಿ ಭರವಸೆ ನೀಡಿದ್ದು, ಈ ವಿಷಯವನ್ನು ಸದನದಲ್ಲಿ ಚರ್ಚಿಸಲು ಸಿದ್ಧರಿದ್ದಾರೆ ಎಂದು ಹೇಳಿದ್ದಾರೆ.
ಕೊಪ್ಪಳ, ಮಾರ್ಚ್ 01: ಗ್ಯಾರಂಟಿ ಯೋಜನೆಗೆ ಅನುದಾನ ಬಳಸುವುದರಲ್ಲಿ ತಪ್ಪೇನು? ಈ ಕುರಿತು ಸದನದಲ್ಲಿ ಕೇಳಲಿ ಉತ್ತರಿಸುತ್ತೇವೆ ಎಂದು ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಹೇಳಿದ್ದಾರೆ. ಗ್ಯಾರಂಟಿಗಳಿಗೆ ಎಸ್‌ಸಿಇಪಿ-ಟಿಎಸ್‌ಪಿ ಅನುದಾನ ವರ್ಗಾವಣೆ ಆರೋಪ ವಿಚಾರವಾಗಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆ ಬೇಡ ಎಂದು ಬಿಜೆಪಿಯವರು ಹೇಳಲಿ. ಬಿಜೆಪಿಗರಿಗೆ ಬಡವರ ಬಗ್ಗೆ ಕಾಳಜಿ ಇಲ್ಲ ಎಂದು ಎಂದು ವಾಗ್ದಾಳಿ ಮಾಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos