ಉಗ್ರರ ದಾಳಿ; ಮಲ್ಲಿಕಾರ್ಜುನ ಖರ್ಗೆ ಹೇಳಿದ್ದು ಮುಖ್ಯವಾಗುತ್ತದೆ, ಉಳಿದವರ ಮಾತು ಬೇಡ: ಹೆಚ್​ಡಿ ದೇವೇಗೌಡ

ಅರುಣ್​ ಕುಮಾರ್​ ಬೆಳ್ಳಿ

Updated on: Apr 29, 2025 | 3:43 PM

ಪಹಲ್ಗಾಮ್ ನಲ್ಲಿ ಕಳೆದ ಮಂಗಳವಾರದಂದ ಉಗ್ರರು ಅಮಾಯಕ ಪ್ರವಾಸಿಗರ ಮೇಲೆ ಗುಂಡು ಹಾರಿಸಿ 26 ಜನರನ್ನು ಸಾಯಿಸಿದ ಬಳಿಕ ರಾಜಕೀಯ ನಾಯಕರ ಹೇಳಿಕೆಗಳ ಬಗ್ಗೆ ವಿನಾಕಾರಣ ಹೆಚ್ಚು ಚರ್ಚೆಯಾಗುತ್ತಿದೆ. ಅದರೆ ದೇವೇಗೌಡರು ತಮ್ಮ ಮುತ್ಸದ್ದಿತನವನ್ನು ಹೇಳಿಕೆಯ ಮೂಲಕ ತೋರಿಸಿದ್ದಾರೆ. ಕೇಂದ್ರ ಸರ್ಕಾರ ಈಗಾಗಲೇ ಕೆಲ ಕ್ರಮಗಳನ್ನು ತೆಗೆದುಕೊಂಡಿದೆ ಮತ್ತು ಕೆಲ ಕ್ರಮಗಳ ಬಗ್ಗೆ ಯೋಚಿಸುತ್ತಿದೆ.

ಬೆಂಗಳೂರು, ಏಪ್ರಿಲ್ 29: ಪಹಲ್ಗಾಮ್ ಉಗ್ರರ ದಾಳಿಯ ವಿಷಯದಲ್ಲಿ ಕೆಲ ಕಾಂಗ್ರೆಸ್ ನಾಯಕರು ತಳೆದಿರುವ ನಿಲುವಿಗೆ ಸಂಬಂಧಿಸಿದಂತೆ ಜೆಡಿಎಸ್ ಪಿತಾಮಹ ಮತ್ತು ರಾಜ್ಯಸಭಾ ಸದಸ್ಯ ಹೆಚ್ ಡಿ ದೇವೇಗೌಡರು ಬಹಳ ತೂಕದ ಮಾತಾಡಿದರೇ ವಿನಃ ಯಾರನ್ನೂ ದೂಷಿಸುವ ಗೋಜಿಗೆ ಹೋಗಲಿಲ್ಲ. ಕಾಂಗ್ರೆಸ್ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ (AICC president Mallikarjun Kharge) ಅವರು ಪಹಲ್ಗಾಮ್ ಘಟನೆ ವಿಚಾರವಾಗಿ ಯಾವುದೇ ಕೊಂಕು ತೆಗೆಯದೇ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಯಾವುದೇ ನಿರ್ಣಯ ತೆಗೆದುಕೊಂಡರೂ ಕಾಂಗ್ರೆಸ್ ಅವರ ಜೊತೆ ನಿಲ್ಲುತ್ತದೆ ಅಂತ ಹೇಳಿದ್ದಾರೆ, ಹಾಗಾಗಿ ಅವರು ಆಡುವ ಮಾತು ಮುಖ್ಯವಾಗುತ್ತದೆ ಮತ್ತು ಅದಕ್ಕೆ ಬೆಲೆ ಜಾಸ್ತಿ, ಬೇರೆ ವರಿಷ್ಠರು ಮಾತಾಡುವುದು ಗಣನೆಗೆ ಬರೋದಿಲ್ಲ ಎಂದು ದೇವೇಗೌಡ ಹೇಳಿದರು.

ಇದನ್ನೂ ಓದಿ:  ಪಹಲ್ಗಾಮ್ ದಾಳಿ: ವಿಶೇಷ ಅಧಿವೇಶನ ಕರೆಯುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ, ರಾಹುಲ್​

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.