SSLC, ಪಿಯುಸಿ ಪರೀಕ್ಷೆಯಲ್ಲಿ ಹಿಜಾಬ್ಗೆ ಅವಕಾಶ ನೀಡುವ ಬಗ್ಗೆ ಸಚಿವ ಮಧು ಬಂಗಾರಪ್ಪ ಹೇಳಿದ್ದಿಷ್ಟು
ಸಚಿವ ಮಧು ಬಂಗಾರಪ್ಪ ಅವರು ಪರೀಕ್ಷೆಗಳಲ್ಲಿ ಹಿಜಾಬ್ ಧರಿಸುವ ಬಗ್ಗೆ ಪ್ರತಿಕ್ರಿಯಿಸಿದ್ದು, ನ್ಯಾಯಾಲಯದ ತೀರ್ಪನ್ನು ಪಾಲಿಸುವುದಾಗಿ ಅವರು ಹೇಳಿದ್ದಾರೆ. ಮಧ್ಯಾಹ್ನದ ಊಟದಲ್ಲಿ ಬದಲಾವಣೆಗಳನ್ನು ಮಾಡಲಾಗುತ್ತಿದೆ ಎಂದೂ ಅವರು ಹೇಳಿದ್ದಾರೆ. ಮಂಗಳೂರಿನ ಶಾಲೆಗಳಲ್ಲಿ ದೈವಾರಾಧನೆ ಸೇರ್ಪಡೆ ವಿಚಾರದ ಬಗ್ಗೆ ಮಾಹಿತಿ ಪಡೆಯುವುದಾಗಿ ತಿಳಿಸಿದ್ದಾರೆ.
ಬೆಂಗಳೂರು, ಫೆಬ್ರವರಿ 20: ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಗೆ ಹಿಜಾಬ್ಗೆ (Hijab) ಅವಕಾಶ ನೀಡುವ ವಿಚಾರವಾಗಿ ಮಾತನಾಡಿರುವ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ, ಕೇಸ್ ಕೋರ್ಟ್ನಲ್ಲಿದೆ, ಹೀಗಾಗಿ ಅದರ ಬಗ್ಗೆ ನಾನು ಮಾತಾಡಲ್ಲ ಎಂದು ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋರ್ಟ್ ಏನು ಹೇಳುತ್ತೋ ಅದನ್ನು ನಾವು ಫಾಲೋ ಮಾಡುತ್ತೇವೆ ಎಂದು ಹೇಳಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos