Jagadish Shettar: ಲೋಕಸಭಾ ಎಲೆಕ್ಷನ್‌ಗೆ ಕಾಂಗ್ರೆಸ್ನಿಂದ ಸ್ಪರ್ಧೆ ಮಾಡುವ ಬಗ್ಗೆ ಶೆಟ್ಟರ್ ಹೇಳಿದ್ದಿಷ್ಟು

Edited By: ಸಾಧು ಶ್ರೀನಾಥ್​

Updated on: Aug 01, 2023 | 4:10 PM

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ 15ರಿಂದ 20 ಸ್ಥಾನ ಗೆಲ್ಲಲಿದೆ ಎಂದು ಜಗದೀಶ್ ಶೆಟ್ಟರ್ ಹೇಳಿದರು. ಆ ವೇಳೆ, ಎಂಪಿ ಎಲೆಕ್ಷನ್​​ಗೆ ನೀವು ಟಿಕೆಟ್​ ಕೇಳಕ್ಕೆ ಹೋಗ್ತೀರಾ ಸಾರ್? ಎಂದು ಸುದ್ದಿಗಾರರು ಕೇಳಿದ್ದಕ್ಕೆ ಶೆಟ್ಟರ್ ಹೇಳಿದ್ದಿಷ್ಟು...

ಹುಬ್ಬಳ್ಳಿ, ಆಗಸ್ಟ್​​ 1: ಕಾಂಗ್ರೆಸ್ ಹೈಕಮಾಂಡ್​​ ಬುಲಾವ್​ ಮೇರೆಗೆ ಕರ್ನಾಟಕ ವಿಧಾನ ಪರಿಷತ್​​ ಸದಸ್ಯ, ಕಾಂಗ್ರೆಸ್​​ ನಾಯಕ ಜಗದೀಶ್ ಶೆಟ್ಟರ್​​ (Jagadish Shettar) ಅವರು ಇಂದು ದೆಹಲಿಗೆ ತೆರಳಲಿದ್ದಾರೆ. 3-4 ದಿನಗಳ ಹಿಂದೆ ಎಐಸಿಸಿ ( AICC) ಕಚೇರಿಯಿಂದ ಕರೆ ಬಂದಿತ್ತು ಎಂದು ಹುಬ್ಬಳ್ಳಿಯಲ್ಲಿ ಜಗದೀಶ್​ ಶೆಟ್ಟರ್ ಹೇಳಿದರು. ಶಾಸಕರ ಅಸಮಾಧಾನಕ್ಕೂ, ಈಗನ ದೆಹಲಿ ಸಭೆಗೂ ಸಂಬಂಧ ಇಲ್ಲ. ಶಾಸಕಾಂಗ ಸಭೆಗೂ ಮುನ್ನವೇ ದೆಹಲಿಗೆ ಬರಲು ಕರೆ ಬಂದಿತ್ತು. ಲೋಕಸಭೆ ಚುನಾವಣೆ, ಸಂಘಟನೆ ದೃಷ್ಟಿಯಿಂದ ಸಭೆ ಕರೆದಿದ್ದಾರೆ. ಸರ್ಕಾರ ಬಂದ ಮೇಲೆ ಸಂಘಟನೆ, ಪಕ್ಷದ ಬೆಳವಣಿಗೆ ಬಗ್ಗೆ ಚರ್ಚೆಯಾಗಲಿದೆ. ಹಾಗಾಗಿ ಕಾಂಗ್ರೆಸ್ ನಾಯಕರ (Congress) ಸಭೆಗೆ ದೆಹಲಿಗೆ ಹೋಗುತ್ತಿದ್ದೇನೆ ಎಂದು ಶೆಟ್ಟರ್​ ಹೇಳಿದರು.

ರಾಜ್ಯ ಬಿಜೆಪಿ ಲೀಡರ್ ಲೆಸ್ ಪಾರ್ಟಿ ಎಂದು MLC ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದರು. ಬಿಜೆಪಿಗೆ ಪ್ರತಿಪಕ್ಷ ನಾಯಕರನ್ನು ಆಯ್ಕೆ ಮಾಡಲು ಆಗಿಲ್ಲ. ಪ್ರಧಾನಿ ಮೋದಿ ಬಂದು ನೂರಾರು ಕಡೆ ಪ್ರಚಾರ ಮಾಡಿದ್ದರು. ಪ್ರಧಾನಿ ಮೋದಿ‌ ಬಂದು ಪ್ರಚಾರ ಮಾಡಿದ ಕಡೆ ಏನಾಯಿತು? ಲೋಕಸಭೆ ಚುನಾವಣೆಯಲ್ಲೂ ಇದೇ ರೀತಿ ಆಗುತ್ತೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ 15ರಿಂದ 20 ಸ್ಥಾನ ಗೆಲ್ಲಲಿದೆ ಎಂದು ಜಗದೀಶ್ ಶೆಟ್ಟರ್ ಹೇಳಿದರು. ಎಂಪಿ ಎಲೆಕ್ಷನ್​​ಗೆ ನೀವು ಟಿಕೆಟ್​ ಕೇಳಕ್ಕೆ ಹೋಗ್ತೀರಾ ಸಾರ್? ಲೋಕಸಭಾ ಎಲೆಕ್ಷನ್‌ಗೆ ಕಾಂಗ್ರೆಸ್ನಿಂದ ಸ್ಪರ್ಧೆ ಮಾಡ್ತೀರಾ ಎಂದು ಕೇಳಿದ್ದಕ್ಕೆ ಶೆಟ್ಟರ್ ಹೇಳಿದ್ದಿಷ್ಟು… ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More