ನಾನೇ ಐದು ವರ್ಷ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಡಿಕೆ ಶಿವಕುಮಾರ್ ಮೊದಲ ಪ್ರತಿಕ್ರಿಯೆ
ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಸಂಬಂಧ ನಡೆಯುತ್ತಿರುವ ಚರ್ಚೆಗಳಿಗೆ ಸದ್ಯದ ಮಟ್ಟಿಗೆ ಬಹುತೇಕ ತೆರೆ ಬಿದ್ದಂತಾಗಿದೆ. ಐದು ವರ್ಷ ನಾನೇ ಸಿಎಂ ಎಂದು ಸಿದ್ದರಾಮಯ್ಯ ಖಡಕ್ ಆಗಿ ಹೇಳಿದ್ದರೆ, ಮತ್ತೊಂದೆಡೆ ‘ಅವರನ್ನು ಬೆಂಬಲಿಸುವುದು ಬಿಟ್ಟು ನನ್ನ ಬಳಿ ಬೇರೆ ಆಯ್ಕೆಗಳಿಲ್ಲ’ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಡಿಯೋ ಇಲ್ಲಿದೆ.
ಚಿಕ್ಕಬಳ್ಳಾಪುರ, ಜುಲೈ 2: ‘ನನ್ನ ಬಳಿ ಬೇರೇನು ಆಯ್ಕೆಗಳಿವೆ? ನಾನು ಅವರ (ಸಿದ್ದರಾಮಯ್ಯ) ಜತೆ ನಿಲ್ಲಬೇಕು. ಅವರನ್ನು ಬೆಂಬಲಿಸಬೇಕು. ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುವೆ.’ ಇದು ಡಿಸಿಎಂ ಡಿಕೆ ಶಿವಕುಮಾರ್ ಮಾತು. 5 ವರ್ಷ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆಗೆ ನಂದಿಗಿರಿಧಾಮದಲ್ಲಿ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಲಕ್ಷಾಂತರ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರ ತರಲು ಶ್ರಮ ಪಟ್ಟಿದ್ದಾರೆ. ಅವರ ಬಗ್ಗೆ ಯೋಚಿಸಬೇಕಿದೆ ಎಂದರು. ಡಿಕೆ ಶಿವಕುಮಾರ್ ಮಾತಿನ ವಿಡಿಯೋ ಇಲ್ಲಿದೆ.
Latest Videos

ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು

‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು

ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ

ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
