ಟ್ರಾಫಿಕ್ ಜಾಮ್ಗೆ ಬ್ರೇಕ್, ಜನ್ರಿಗೆ ಖುಷ್: ಡಬಲ್ ಡೆಕ್ಕರ್ ಫ್ಲೈಓವರ್ ಬಗ್ಗೆ ಸವಾರರು ಹೇಳಿದ್ದಿಷ್ಟು
ದಕ್ಷಿಣ ಭಾರತದ ಮೊಟ್ಟ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ಗೆ ಇಂದು ಸ್ವತಃ ಡಿಸಿಎಂ ಡಿಕೆ ಶಿವಕುಮಾರ್ ಫ್ಲೈ ಓವರ್ ಮೇಲೆ ಕಾರು ಚಲಾಯಿಸಿ ಪ್ರಾಯೋಗಿಕವಾಗಿ ವಾಹನ ಸಂಚಾರಕ್ಕೆ ಚಾಲನೆ ನೀಡಿದ್ದಾರೆ. ಆ ಮೂಲಕ ಬೆಂಗಳೂರಿಗರ ಹಲವು ವರ್ಷಗಳ ಕನಸು ನನಸಾಗಿದೆ. ಈ ಬಗ್ಗೆ ಸವಾರರು ಸಂತಸ ವ್ಯಕ್ತಪಡಿಸಿದ್ದು ಹೀಗೆ.
ಬೆಂಗಳೂರು, ಜುಲೈ 17: ಬೆಂಗಳೂರಿಗರ ಹಲವು ವರ್ಷಗಳ ಕನಸು ನನಸಾಗಿದೆ. ದಕ್ಷಿಣ ಭಾರತದ ಮೊಟ್ಟ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ (double-decker flyover) ವಾಹನ ಸಂಚಾರಕ್ಕೆ ಮುಕ್ತವಾಗಿದೆ. ರಾಗಿಗುಡ್ಡ ಟು ಸೆಂಟ್ರಲ್ ಸಿಲ್ಕ್ ಬೋರ್ಡ್ ನಡುವಿನ ಮಾರ್ಗದಲ್ಲಿ ಪ್ರಾಯೋಗಿಕವಾಗಿ ಸಂಚಾರ ಶುರುವಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar), ಕಾರು ಚಲಾಯಿಸುವ ಮೂಲಕ ಪ್ರಾಯೋಗಿಕವಾಗಿ ವಾಹನ ಸಂಚಾರಕ್ಕೆ ಚಾಲನೆ ನೀಡಿದ್ದಾರೆ. ಈ ಕುರಿತಾಗಿ ವಾಹನ ಸವಾರರು ಟಿವಿ9 ಜೊತೆಗೆ ಮಾತನಾಡಿದ್ದು, ಈ ಜಂಕ್ಷನ್ಲ್ಲಿ ತುಂಬಾ ಟ್ರಾಫಿಕ್ ಜಾಮ್ ಆಗುತ್ತದೆ. ಮಳೆಗಾಲದಲ್ಲಿ ತುಂಬಾ ಕಷ್ಟವಾಗುತ್ತಿತ್ತು. ಇದೀಗ ಡಬಲ್ ಡೆಕ್ಕರ್ ಫ್ಲೈಓವರ್ ಮಾಡುವ ಮೂಲಕ ಜನರಿಗೆ ಅನುಕೂಲವಾಗಲಿದೆ. ಹಾಗಾಗಿ ನಾನು ಡಿಕೆ ಶಿವಕುಮಾರ್ ಅವರಿಗೆ ಧನ್ಯವಾದ ಹೇಳುತ್ತೇನೆ ಎಂದು ಕಾರು ಚಾಲಕ ಭೂಷಣ್ ಎನ್ನುವವರು ಹೇಳಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.