AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಪಕ್ಷದಲ್ಲಿ ಸಾಮಾನ್ಯ ಪತ್ರಕರ್ತ ಕೂಡ ಸಿಎಂ, ಪಿಎಂ ಆಗಬಹುದು, ಪ್ರಲ್ಹಾದ್ ಜೋಶಿ ಸಿಎಂ ಆದರೆ ತಪ್ಪೇನಿದೆ? ಎಮ್ ಪಿ ರೇಣುಕಾಚಾರ್ಯ

ನಮ್ಮ ಪಕ್ಷದಲ್ಲಿ ಸಾಮಾನ್ಯ ಪತ್ರಕರ್ತ ಕೂಡ ಸಿಎಂ, ಪಿಎಂ ಆಗಬಹುದು, ಪ್ರಲ್ಹಾದ್ ಜೋಶಿ ಸಿಎಂ ಆದರೆ ತಪ್ಪೇನಿದೆ? ಎಮ್ ಪಿ ರೇಣುಕಾಚಾರ್ಯ

ಅರುಣ್​ ಕುಮಾರ್​ ಬೆಳ್ಳಿ
|

Updated on:Feb 07, 2023 | 2:22 PM

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ (PM Narendra Modi) ಪ್ರಕರಣವನ್ನೇ ತೆಗೆದುಕೊಳ್ಳಿ, ಬಿಜೆಪಿಯಲ್ಲಿ ಒಬ್ಬ ಸಾಮಾನ್ಯ ಕಾರ್ಯಕರ್ತ ಸಹ ಮುಖ್ಯಮಂತ್ರಿ, ಪ್ರಧಾನ ಮಂತ್ರಿ ಆಗಬಹುದು ಎಂದು ರೇಣುಕಾಚಾರ್ಯ ಹೇಳಿದರು.

ದೆಹಲಿ: ರಾಷ್ಟ್ರದ ರಾಜಧಾನಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಿಜೆಪಿ ಶಾಸಕ ಎಮ್ ಪಿ ರೇಣುಕಾಚಾರ್ಯ (MP Renukacharya) ಅವರು ರಾಜ್ಯದಲ್ಲಿ ಬಿಜಪಿ ಅಧಿಕಾರಕ್ಕೆ ಬಂದರೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು (Pralhad Joshi) ಮುಖ್ಯಮಂತ್ರಿಯಾದರೆ ಅದಲ್ಲಿ ತಪ್ಪೇನಿದೆ ಅಂತ ಪ್ರಶ್ನಿಸಿದರು. ಅವರು ವಿದ್ಯಾರ್ಥಿ ಜೀವನದಿಂದಲೇ ತಮ್ಮನ್ನು ಪಕ್ಷದಲ್ಲಿ ತೊಡಗಿಸಿಕೊಂಡು, ರಾಜ್ಯ ಬಿಜಪಿ ಘಟಕದ ಅಧ್ಯಕ್ಷರಾಗಿ, ಸಂಸದರಾಗಿ ಮತ್ತು ಕೇಂದ್ರದಲ್ಲಿ ಸಚಿವರಾಗಿ ಅಪಾರ ಅನುಭವ ಹೊಂದಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ (PM Narendra Modi) ಪ್ರಕರಣವನ್ನೇ ತೆಗೆದುಕೊಳ್ಳಿ, ಬಿಜೆಪಿಯಲ್ಲಿ ಒಬ್ಬ ಸಾಮಾನ್ಯ ಕಾರ್ಯಕರ್ತ ಸಹ ಮುಖ್ಯಮಂತ್ರಿ, ಪ್ರಧಾನ ಮಂತ್ರಿ ಆಗಬಹುದು ಎಂದು ರೇಣುಕಾಚಾರ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 07, 2023 02:22 PM