WhatsApp Ban: ಭಾರತದ ನಿಯಮ ಉಲ್ಲಂಘಿಸಿದ 65 ಲಕ್ಷಕ್ಕೂ ಅಧಿಕ ವಾಟ್ಸ್ಆ್ಯಪ್ ಅಕೌಂಟ್ ಬಂದ್
ವಾಟ್ಸ್ಆ್ಯಪ್ ಮೇ ತಿಂಗಳಲ್ಲಿ ಬರೋಬ್ಬರಿ 65 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿರ್ಬಂಧಿಸಿದೆ. 2021 ಬಳಕೆದಾರರ ಸುರಕ್ಷತ ಕಾಯಿದೆ 4(1)(D) ಅಡಿಯಲ್ಲಿ ವಾಟ್ಸ್ಆ್ಯಪ್ ಈ ನಿರ್ಧಾರವನ್ನು ತೆಗೆದುಕೊಂಡಿದೆ.
ಜನಪ್ರಿಯ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್ಆ್ಯಪ್ ಮೇ ತಿಂಗಳಲ್ಲಿ ಬರೋಬ್ಬರಿ 65 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿರ್ಬಂಧಿಸಿದೆ. 2021 ಬಳಕೆದಾರರ ಸುರಕ್ಷತ ಕಾಯಿದೆ 4(1)(D) ಅಡಿಯಲ್ಲಿ ವಾಟ್ಸ್ಆ್ಯಪ್ ಈ ನಿರ್ಧಾರವನ್ನು ತೆಗೆದುಕೊಂಡಿದೆ. ವಾಟ್ಸ್ಆ್ಯಪ್ ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 65,08,000 ವಾಟ್ಸ್ಆ್ಯಪ್ ಖಾತೆಗಳನ್ನು ಬ್ಯಾನ್ ಮಾಡಲಾಗಿದೆ ಎಂದು ಮೆಟಾ ತಿಳಿಸಿದೆ. ಈ ಹಿಂದೆ ಏಪ್ರಿಲ್ ತಿಂಗಳಲ್ಲಿ ಕೂಡ ಭಾರತದಲ್ಲಿ 74 ಲಕ್ಷಕ್ಕೂ ಅಧಿಕ ಖಾತೆಗಳನ್ನು ನಿಷೇಧಿಸಿದೆ ಎಂದು ವಾಟ್ಸ್ಆ್ಯಪ್ ಹೇಳಿತ್ತು. ಈ ಬಾರಿಯೂ ವಾಟ್ಸ್ಆ್ಯಪ್ ಅಂತಹ ಖಾತೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡಿದೆ.
Latest Videos