WhatsApp Update: ತೊಂದರೆ ಕೊಡುವ ವಾಟ್ಸ್ಆ್ಯಪ್ ಕರೆ ತಡೆಯಲು ಬರುತ್ತಿದೆ ಹೊಸ ಅಪ್ಡೇಟ್
ಅಪರಿಚಿತ ಸಂಖ್ಯೆಗಳಿಂದ ಬರುವ ಕರೆಯನ್ನು ಮ್ಯೂಟ್ ಮಾಡುವ ಸೌಲಭ್ಯವನ್ನು ನೀಡಿದೆ. ಇದರ ಮೂಲಕ ನಿಮ್ಮ ಫೋನ್‌ಗಳಿಗೆ ವಾಟ್ಸ್ಆ್ಯಪ್ ಮೂಲಕ ಬರುವ ಅಪರಿಚಿತ ಕರೆಗಳನ್ನು ಸೈಲೆನ್ಸ್ ಮಾಡಬಹುದು. ಇದಕ್ಕಾಗಿ ನೀವು ವಾಟ್ಸ್ಆ್ಯಪ್ನಲ್ಲಿ ಪ್ರೈವೆಸಿ ಸೆಟ್ಟಿಂಗ್ ಮಾಡಿದರೆ ಸಾಕಾಗುತ್ತದೆ.
ವಾಟ್ಸ್ಆ್ಯಪ್ ಇದೀಗ ತನ್ನ ಆಂಡ್ರಾಯ್ಡ್ ಮತ್ತು iOS ಬಳಕೆದಾರರಿಗೆ ಅಪರಿಚಿತ ಸಂಖ್ಯೆಗಳಿಂದ ಬರುವ ಕರೆಯನ್ನು ಮ್ಯೂಟ್ ಮಾಡುವ ಸೌಲಭ್ಯವನ್ನು ನೀಡಿದೆ. ಇದರ ಮೂಲಕ ನಿಮ್ಮ ಫೋನ್‌ಗಳಿಗೆ ವಾಟ್ಸ್ಆ್ಯಪ್ ಮೂಲಕ ಬರುವ ಅಪರಿಚಿತ ಕರೆಗಳನ್ನು ಸೈಲೆನ್ಸ್ ಮಾಡಬಹುದು. ಇದಕ್ಕಾಗಿ ನೀವು ವಾಟ್ಸ್ಆ್ಯಪ್ನಲ್ಲಿ ಪ್ರೈವೆಸಿ ಸೆಟ್ಟಿಂಗ್ ಮಾಡಿದರೆ ಸಾಕಾಗುತ್ತದೆ. ಇದರಿಂದ, ಅಪರಿಚಿತ ಸಂಖ್ಯೆಗಳಿಂದ ಬರುವ ಕಿರಿಕಿರಿಯ ಕರೆಯನ್ನು ತಪ್ಪಿಸಬಹುದು, ಜತೆಗೆ ಸ್ಪ್ಯಾಮ್ ಮತ್ತು ಸ್ಕ್ಯಾಮ್ ಕರೆಗಳನ್ನು ನಿಯಂತ್ರಿಸಬಹುದು. ಹೊಸ ಅಪ್ಡೇಟ್ ಕುರಿತು ಹೆಚ್ಚಿನ ವಿವರ ವಿಡಿಯೊದಲ್ಲಿದೆ.