ಗೋಡೌನ್‌ನಲ್ಲಿ ಮೂಟೆಗಳ ಅಡಿ ಸಿಲುಕಿದ ಕಾರ್ಮಿಕರು; ಓರ್ವ ಸಾವು

Updated on: Sep 10, 2024 | 6:23 PM

ಐವರು ಕಾರ್ಮಿಕರು ಗೋಡೌನ್​ನಲ್ಲಿ ಮೂಟೆಗಳನ್ನು ಇಳಿಸುತ್ತಿದ್ದಾಗ ಅವಘಡ ಸಂಭವಿಸಿದೆ. ಮೇಲೆ ಹೇರಿಟ್ಟ ಗೋಧಿಯ ಮೂಟೆಗಳು ಇದ್ದಕ್ಕಿದ್ದಂತೆ ಕೆಳಗೆ ಬಿದ್ದವು. ತಕ್ಷಣ ಕಾರ್ಮಿಕರು ಓಡಲು ಪ್ರಯತ್ನಿಸಿದರೂ ಅವರು ಅದರಡಿ ಸಿಲುಕಿದ್ದಾರೆ.

ಗುಜರಾತ್​ನ ಅಮ್ರೇಲಿಯಲ್ಲಿ ದಾರುಣ ಘಟನೆಯೊಂದು ನಡೆದಿದೆ. ಕೆಲವು ಕಾರ್ಮಿಕರು ಸ್ಥಳೀಯ ಗೋಡೌನ್‌ನಲ್ಲಿ ಗೋಧಿಯ ಮೂಟೆಗಳನ್ನು ಇಳಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಇದ್ದಕ್ಕಿದ್ದಂತೆ ಮೂಟೆಗಳು ಕಾರ್ಮಿಕರ ಮೇಲೆ ಬಿದ್ದವು. ಗೋಣಿಚೀಲಗಳು ಕುಸಿದು ಒಬ್ಬ ಕಾರ್ಮಿಕ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ. ಗೋಣಿಚೀಲದಡಿ ಸಿಲುಕಿದ್ದ ಕಾರ್ಮಿಕರನ್ನು ಸಹ ಕಾರ್ಮಿಕರು ಹೊರತೆಗೆದಿದ್ದಾರೆ. ಇದರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Sep 10, 2024 06:21 PM
Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More