Video: ರೇಬಿಸ್ ಕುರಿತ ಜಾಗೃತಿ ನಾಟಕದ ವೇಳೆ ಕಲಾವಿದನನ್ನು ಕಚ್ಚಿದ ಬೀದಿ ನಾಯಿ
ಇತ್ತೀಚಿನ ದಿನಗಳಲ್ಲಿ ದೇಶಾದ್ಯಂತ ರೇಬಿಸ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಬೀದಿ ನಾಯಿಗಳ ಕಾಟ ವಿಪರೀತವಾಗಿದೆ. ಈ ಹಿನ್ನೆಲೆಯಲ್ಲಿ ಕೇರಳದಲ್ಲಿ ರೇಬಿಸ್ ಕುರಿತು ಜಾಗೃತಿ ನಾಟಕವನ್ನು ಆಯೋಜಿಸಲಾಗಿತ್ತು. ಆದರೆ ಆ ಬೀದಿ ನಾಟಕ ಅನಿರೀಕ್ಷಿತ ತಿರುವು ಪಡೆದುಕೊಂಡಿತ್ತು. ಬೀದಿ ನಾಯಿಯೊಂದು ವೇದಿಕೆಯ ಮೇಲೆ ಓಡಿ ಬಂದು ಕಲಾವಿದರೊಬ್ಬರನ್ನು ಕಚ್ಚಿತ್ತು.
ಕಣ್ಣೂರು, ಅಕ್ಟೋಬರ್ 07: ಇತ್ತೀಚಿನ ದಿನಗಳಲ್ಲಿ ದೇಶಾದ್ಯಂತ ರೇಬಿಸ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಬೀದಿ ನಾಯಿಗಳ ಕಾಟ ವಿಪರೀತವಾಗಿದೆ. ಈ ಹಿನ್ನೆಲೆಯಲ್ಲಿ ಕೇರಳದಲ್ಲಿ ರೇಬಿಸ್ ಕುರಿತು ಜಾಗೃತಿ ನಾಟಕವನ್ನು ಆಯೋಜಿಸಲಾಗಿತ್ತು. ಆದರೆ ಆ ಬೀದಿ ನಾಟಕ ಅನಿರೀಕ್ಷಿತ ತಿರುವು ಪಡೆದುಕೊಂಡಿತ್ತು. ಬೀದಿ ನಾಯಿಯೊಂದು ವೇದಿಕೆಯ ಮೇಲೆ ಓಡಿ ಬಂದು ಕಲಾವಿದರೊಬ್ಬರನ್ನು ಕಚ್ಚಿತ್ತು.
ಸಂಜೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಕಂದಕ್ಕೈ ಕೃಷ್ಣ ಪಿಳ್ಳೈ ಗ್ರಂಥಾಲಯದಲ್ಲಿ ಬೀದಿ ನಾಯಿಗಳ ದಾಳಿಯ ಬಗ್ಗೆ ಜಾಗೃತಿ ಕಾರ್ಯಕ್ರಮದ ಭಾಗವಾಗಿ ಪೆಕ್ಕಲಂ (ರೇಬಿಸ್ ಸೀಸನ್) ಎಂಬ ಏಕಾಂಕ ನಾಟಕವನ್ನು ಪ್ರದರ್ಶಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಈ ನಾಟಕದಲ್ಲಿ ನಾಯಿಗಳು ಬೊಗಳುತ್ತಾ ಮಗುವಿನ ಮೇಲೆ ದಾಳಿ ಮಾಡುತ್ತಿರುವುದು ಹಾಗೂ ಮಗುವನ್ನು ಆ ನಾಯಿಯಿಂದ ರಕ್ಷಿಸುವ ದೃಶ್ಯವಿತ್ತು. ಈ ವೇಳೆ ಸ್ಪೀಕರ್ನಲ್ಲಿ ನಾಯಿ ಬೊಗಳುವ ಶಬ್ದ ಕೇಳಿ ಓಡಿ ಬಂದ ಬೀದಿ ನಾಯಿ ಕಲಾವಿದನನ್ನು ಕಚ್ಚಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕಳುಹಿಸಲಾಯಿತು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

