Video: ರೇಬಿಸ್ ಕುರಿತ ಜಾಗೃತಿ ನಾಟಕದ ವೇಳೆ ಕಲಾವಿದನನ್ನು ಕಚ್ಚಿದ ಬೀದಿ ನಾಯಿ

Updated on: Oct 07, 2025 | 1:03 PM

ಇತ್ತೀಚಿನ ದಿನಗಳಲ್ಲಿ ದೇಶಾದ್ಯಂತ ರೇಬಿಸ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಬೀದಿ ನಾಯಿಗಳ ಕಾಟ ವಿಪರೀತವಾಗಿದೆ. ಈ ಹಿನ್ನೆಲೆಯಲ್ಲಿ ಕೇರಳದಲ್ಲಿ ರೇಬಿಸ್ ಕುರಿತು ಜಾಗೃತಿ ನಾಟಕವನ್ನು ಆಯೋಜಿಸಲಾಗಿತ್ತು. ಆದರೆ ಆ ಬೀದಿ ನಾಟಕ ಅನಿರೀಕ್ಷಿತ ತಿರುವು ಪಡೆದುಕೊಂಡಿತ್ತು. ಬೀದಿ ನಾಯಿಯೊಂದು ವೇದಿಕೆಯ ಮೇಲೆ ಓಡಿ ಬಂದು ಕಲಾವಿದರೊಬ್ಬರನ್ನು ಕಚ್ಚಿತ್ತು.

ಕಣ್ಣೂರು, ಅಕ್ಟೋಬರ್ 07: ಇತ್ತೀಚಿನ ದಿನಗಳಲ್ಲಿ ದೇಶಾದ್ಯಂತ ರೇಬಿಸ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಬೀದಿ ನಾಯಿಗಳ ಕಾಟ ವಿಪರೀತವಾಗಿದೆ. ಈ ಹಿನ್ನೆಲೆಯಲ್ಲಿ ಕೇರಳದಲ್ಲಿ ರೇಬಿಸ್ ಕುರಿತು ಜಾಗೃತಿ ನಾಟಕವನ್ನು ಆಯೋಜಿಸಲಾಗಿತ್ತು. ಆದರೆ ಆ ಬೀದಿ ನಾಟಕ ಅನಿರೀಕ್ಷಿತ ತಿರುವು ಪಡೆದುಕೊಂಡಿತ್ತು. ಬೀದಿ ನಾಯಿಯೊಂದು ವೇದಿಕೆಯ ಮೇಲೆ ಓಡಿ ಬಂದು ಕಲಾವಿದರೊಬ್ಬರನ್ನು ಕಚ್ಚಿತ್ತು.

ಸಂಜೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಕಂದಕ್ಕೈ ಕೃಷ್ಣ ಪಿಳ್ಳೈ ಗ್ರಂಥಾಲಯದಲ್ಲಿ ಬೀದಿ ನಾಯಿಗಳ ದಾಳಿಯ ಬಗ್ಗೆ ಜಾಗೃತಿ ಕಾರ್ಯಕ್ರಮದ ಭಾಗವಾಗಿ ಪೆಕ್ಕಲಂ (ರೇಬಿಸ್ ಸೀಸನ್) ಎಂಬ ಏಕಾಂಕ ನಾಟಕವನ್ನು ಪ್ರದರ್ಶಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಈ ನಾಟಕದಲ್ಲಿ ನಾಯಿಗಳು ಬೊಗಳುತ್ತಾ ಮಗುವಿನ ಮೇಲೆ ದಾಳಿ ಮಾಡುತ್ತಿರುವುದು ಹಾಗೂ ಮಗುವನ್ನು ಆ ನಾಯಿಯಿಂದ ರಕ್ಷಿಸುವ ದೃಶ್ಯವಿತ್ತು. ಈ ವೇಳೆ ಸ್ಪೀಕರ್​ನಲ್ಲಿ ನಾಯಿ ಬೊಗಳುವ ಶಬ್ದ ಕೇಳಿ ಓಡಿ ಬಂದ ಬೀದಿ ನಾಯಿ ಕಲಾವಿದನನ್ನು ಕಚ್ಚಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕಳುಹಿಸಲಾಯಿತು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More