ಅಪ್ಪುನ ಆಸ್ಪತ್ರೆಗೆ ಕರೆದೊಯ್ಯುವಾಗ ಟ್ರಾಫಿಕ್ ಜಾಮ್ ಆಗಿತ್ತು: ರಾಘವೇಂದ್ರ ರಾಜ್​ಕುಮಾರ್​

ಅಪ್ಪುನ ಆಸ್ಪತ್ರೆಗೆ ಕರೆದೊಯ್ಯುವಾಗ ಟ್ರಾಫಿಕ್ ಜಾಮ್ ಆಗಿತ್ತು: ರಾಘವೇಂದ್ರ ರಾಜ್​ಕುಮಾರ್​

TV9 Web
| Updated By: ರಾಜೇಶ್ ದುಗ್ಗುಮನೆ

Updated on:Nov 28, 2021 | 9:07 PM

‘ಅಪ್ಪು ಅಮರ’ಕ್ಕೆ ರಾಘವೇಂದ್ರ ರಾಜ್​ಕುಮಾರ್​ ಅವರು ಆಗಮಿಸಿದ್ದರು. ಈ ವೇಳೆ ಅವರು ಭಾವುಕರಾದರು. ಅಲ್ಲದೆ, ಪುನೀತ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಟ್ರಾಫಿಕ್​ ಜಾಮ್​ ಉಂಟಾಗಿತ್ತು ಎಂದಿದ್ದಾರೆ.

ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ವತಿಯಿಂದ ಪವರ್​​ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರಿಗೆ ನಮನ ಸಲ್ಲಿಸುವ ಕೆಲಸ ನಡೆಯುತ್ತಿದೆ. ‘ಅಪ್ಪು ಅಮರ’ ಹೆಸರಿನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪುನೀತ್ ರಾಜ್​​ಕುಮಾರ್ ನಮ್ಮೊಂದಿಗಿಲ್ಲ. ಆದರೆ ಅವರು ಬಿಟ್ಟು ಹೋದ ಆದರ್ಶಗಳು ನಮ್ಮ ಜತೆ ಇವೆ. ಅದನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು, ಸಾಮಾಜಿಕ ಸೇವೆಯಲ್ಲಿ ಕೈ ಜೋಡಿಸಬೇಕು ಎನ್ನುವ ಸಂದೇಶ ಈ ಕಾರ್ಯಕ್ರಮದಲ್ಲಿ ಇದೆ. ‘ಅಪ್ಪು ಅಮರ’ಕ್ಕೆ ರಾಘವೇಂದ್ರ ರಾಜ್​ಕುಮಾರ್​ ಅವರು ಆಗಮಿಸಿದ್ದರು. ಈ ವೇಳೆ ಅವರು ಭಾವುಕರಾದರು. ಅಲ್ಲದೆ, ಪುನೀತ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಟ್ರಾಫಿಕ್​ ಜಾಮ್​ ಉಂಟಾಗಿತ್ತು ಎಂದಿದ್ದಾರೆ.

ಇದನ್ನೂ ಓದಿ: ಪುನೀತ್ ರಾಜ್​ಕುಮಾರ್​ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ; ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

Published on: Nov 28, 2021 08:00 PM