ಎಸ್ಎಂ ಕೃಷ್ಣ ಅವಧಿಯಲ್ಲಿ ದಿನವೊಂದರಲ್ಲಿ 300 ಐಟಿ ಕಂಪನಿ ನೋಂದಣಿಯಾಗಿತ್ತು: ಪರಮೇಶ್ವರ್ ಮೆಲುಕು
ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಸಿಎಂ ಎಸ್ಎಂ ಕೃಷ್ಣ ಬೆಂಗಳೂರಿಗೆ ನೀಡಿದ ಕೊಡುಗೆ ಮತ್ತು ಆಡಳಿತಾತ್ಮಕವಾಗಿ ಮಾಡಿದ ಸಾಧನೆಗಳ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಬೆಳಗಾವಿಯ ಸುವರ್ಣ ವಿಧಾನಸೌಧದ ಕಲಾಪದಲ್ಲಿ ಪ್ರಸ್ತಾಪಿಸಿ ಶ್ರದ್ಧಾಂಜಲಿ ಸಲ್ಲಿಸಿದರು. ಪರಮೇಶ್ವರ್ ಮಾತಿನ ವಿಡಿಯೋ ಇಲ್ಲಿದೆ.
ಬೆಂಗಳೂರು, ಡಿಸೆಂಬರ್ 10: ಎಸ್ಎಂ ಕೃಷ್ಣ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮಾಹಿತಿ ತಂತ್ರಜ್ಞಾನ ಕ್ರಾಂತಿಯೇ ಆಯಿತು. ಆ ಕಾಲದಲ್ಲಿ ಬೆಂಗಳೂರಿನಲ್ಲಿ ದಿನವೊಂದರಲ್ಲಿ 200-300 ಐಟಿ ಕಂಪನಿಗಳು ನೋಂದಣಿಯಾಗಿದ್ದೂ ಇದೆ ಎಂದು ಗೃಹ ಸಚಿವ ಡಾ. ಪರಮೇಶ್ವರ ನೆನಪಿಸಿಕೊಂಡರು. ಮಂಗಳವಾರ ನಸುಕಿನಲ್ಲಿ ನಿಧನರಾದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣಗೆ ಶ್ರದ್ಧಾಂಜಲಿ ಸಲ್ಲಿಸಿ ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ಅವರು, ಬೆಂಗಳೂರು ವಿಶ್ವಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಮಾಡಿದವರು ಎಸ್ಎಂ ಕೃಷ್ಣ ಎಂದರು.
ಎಸ್ಎಂ ಕೃಷ್ಣರ ರಾಜಕೀಯ ಸಾಧನೆಗಳು, ಆಡಳಿತಾತ್ಮಕ ಸಾಧನೆಗಳು ಹಾಗೂ ಬೆಂಗಳೂರಿಗೆ ಅವರು ನೀಡಿರುವ ಕೊಡುಗೆಗಳ ಬಗ್ಗೆ ಪರಮೇಶ್ವರ್ ಬೆಳಗಾವಿ ಅಧಿವೇಶನದಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟರು. ವಿಡಿಯೋ ಇಲ್ಲಿದೆ.
ಇದನ್ನೂ ಓದಿ: ಎಸ್ಎಂ ಕೃಷ್ಣ ಸುದೀರ್ಘ ರಾಜಕೀಯ ಜೀವನದ ಹಿನ್ನೋಟ
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ