ಚಿನ್ನಸ್ವಾಮಿ ಸ್ಟೇಡಿಯಲ್ಲಿ ಕಾಲ್ತುಳಿತ ದುರಂತ: 11 ಜನರ ಸಾವಿಗೆ ಹೊಣೆ ಯಾರು? ಅಶೋಕ್​​ ಪ್ರಶ್ನೆ

Edited By:

Updated on: Jul 15, 2026 | 3:30 PM

Chinnaswamy stadium stampede: ಕಾಲ್ತುಳಿತ ದುರಂತದಲ್ಲಿ ಅಧಿಕಾರಿಗಳಿಗೆ ಕ್ಲೀನ್ ಚಿಟ್ ಸಂಬಂಧ ಪ್ರತಿಕ್ರಿಯಸಿರುವ ವಿಪಕ್ಷ ನಾಯಕ ಆರ್​​. ಅಶೋಕ್​​ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 11 ಮಂದಿ ಅಮಾಯಕರ ಸಾವಿಗೆ ನ್ಯಾಯ ಎಲ್ಲಿದೆ? ಕಾಂಗ್ರೆಸ್ ಸರ್ಕಾರ ಘಟನೆಯನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದು, ಇಲ್ಲಿ ಅಪರಾಧಿಗಳು ಹಾಗಿದ್ದರೆ ಯಾರು ಎಂದವರು ಪ್ರಶ್ನಿಸಿದ್ದಾರೆ. ನಮ್ಮ ಸರ್ಕಾರ ಬಂದರೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಕೊಡ್ತೇವೆ ಎಂದೂ ಅವರು ತಿಳಿಸಿದ್ದಾರೆ.

ಬೆಂಗಳೂರು, ಜುಲೈ 15: ಚಿನ್ನಸ್ವಾಮಿ ಸ್ಟೇಡಿಯಲ್ಲಿ ಕಾಲ್ತುಳಿತ ಪ್ರಕರಣ ಸಂಬಂಧ ಐಪಿಎಸ್ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಕ್ಲೀನ್​ಚಿಟ್ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ಅಧಿಕಾರಿಗಳು ನಿರಪರಾಧಿಗಳಾದರೆ ಅಪರಾಧಿಗಳು ಯಾರು? ಈ ಸಾವಿಗೆ ನ್ಯಾಯ ಎಲ್ಲಿದೆ? ಎಂದು ಪ್ರಶ್ನೆ ಮಾಡಿದ್ದಾರೆ. ಪತ್ನಿ, ಮಕ್ಕಳ ಜತೆ ಸ್ಟೇಜ್ ಮೇಲೆ ಇದ್ದವರ ಮೇಲೆ ಕ್ರಮ ಆಗಬೇಕಿತ್ತು. ಆದರೆ 11 ಜನರ ಸಾವಿಗೆ ಯಾರೂ ಕಾರಣರಲ್ಲ ಎಂದು ಹೇಳಲು ಸರ್ಕಾರ ಹೊರಟಿದೆ. ನಮ್ಮ ಸರ್ಕಾರ ಬಂದರೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಕೊಡ್ತೇವೆ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More