ನೀರಿಗಾಗಿ ಹಾಹಾಕಾರ ಶುರುವಾಗಿದ್ದರೆ ಡಿಕೆ ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನರಾಗಿದ್ದಾರೆ: ಹೆಚ್ ಡಿ ಕುಮಾರಸ್ವಾಮಿ
ನಮ್ಮನ್ನು ಸಭೆಗೆ ಕರೆಸಿ ಕಾಫಿ, ಬಾದಾಮಿ ಕೊಟ್ಟರೆ ಕಾವೇರಿ ನದಿ ನೀರಿನ ಸಮಸ್ಯೆ ಬಗೆಹರಿಯದು ಎಂದ ಕುಮಾರಸ್ವಾಮಿ, ರಾಜ್ಯದಲ್ಲಿ 7 ಜನ ನಿವೃತ್ತ ಅಡ್ವೋಕೇಟ್ ಜನರಲ್ ಗಳಿದ್ದಾರೆ, ಹಲವಾರು ನಿವೃತ್ತ ನ್ಯಾಯಾಧೀಶರಿದ್ದಾರೆ, ಸರ್ಕಾರ ಅವರೊಂದಿಗೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಬೇಕು ಅಂತ ಹೇಳಿದರು. ಶಿವಕುಮಾರ್ ಗೆ ಬ್ರ್ಯಾಂಡ್ ಬೆಂಗಳೂರು ಸಾಕಾರಗೊಳಿಸುವುದು ಸಾಧ್ಯವಿಲ್ಲ, ಅಸಲಿಗೆ ಬೆಂಗಳೂರು ಹಾಳಾಗಿದ್ದೇ ಇವರಿಂದ ಎಂದು ಕುಮಾರಸ್ವಾಮಿ ಜರಿದರು.
ದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ (alliance) ಮಾಡಿಕೊಳ್ಳುವ ಉದ್ದೇಶದಿಂದ ಇಂದು ದೆಹಲಿಯಲ್ಲಿ ಬಿಜೆಪಿ ವರಿಷ್ಠರೊಂದಿಗೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿಗೆ (HD Kumaraswamy) ಡಿಕೆ ಶಿವಕುಮಾರ್ (DK Shivakumar) ಎಲ್ಲಿಲ್ಲದ ಕೋಪವುಕ್ಕಿ ತರಾಟೆಗೆ ತೆಗೆದುಕೊಂಡರು. ರೈತರ ಹಿತಾಸಕ್ತಿ ಕಾಯುವುದು ಇವರಿಗೆ ಸಾಧ್ಯವಾಗುತ್ತಿಲ್ಲ, ರೈತರಲ್ಲಿ ನೀರಿಗಾಗಿ ಹಾಹಾಕಾರ ಎದ್ದಿದ್ದರೂ ಇವರು ಯಾವುದೋ ಸ್ಕೀಮ್ ಮೂಲಕ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನರಾಗಿದ್ದಾರೆ, ನಮ್ಮನ್ನು ಸಭೆಗೆ ಕರೆಸಿ ಕಾಫಿ, ಬಾದಾಮಿ ಕೊಟ್ಟರೆ ಕಾವೇರಿ ನದಿ ನೀರಿನ ಸಮಸ್ಯೆ ಬಗೆಹರಿಯದು ಎಂದ ಕುಮಾರಸ್ವಾಮಿ, ರಾಜ್ಯದಲ್ಲಿ 7 ಜನ ನಿವೃತ್ತ ಅಡ್ವೋಕೇಟ್ ಜನರಲ್ ಗಳಿದ್ದಾರೆ, ಹಲವಾರು ನಿವೃತ್ತ ನ್ಯಾಯಾಧೀಶರಿದ್ದಾರೆ, ಸರ್ಕಾರ ಅವರೊಂದಿಗೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಬೇಕು ಅಂತ ಹೇಳಿದರು. ಶಿವಕುಮಾರ್ ಗೆ ಬ್ರ್ಯಾಂಡ್ ಬೆಂಗಳೂರು ಸಾಕಾರಗೊಳಿಸುವುದು ಸಾಧ್ಯವಿಲ್ಲ, ಅಸಲಿಗೆ ಬೆಂಗಳೂರು ಹಾಳಾಗಿದ್ದೇ ಇವರಿಂದ ಎಂದು ಕುಮಾರಸ್ವಾಮಿ ಜರಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್

