‘ಘೋಸ್ಟ್’ ಮಧ್ಯರಾತ್ರಿ ಶೋಗೆ ನುಗ್ಗಿದ ಫ್ಯಾನ್ಸ್; ಸಂತೋಷ್ ಥಿಯೇಟರ್ ಗಾಜು ಪುಡಿಪುಡಿ

Updated on: Oct 19, 2023 | 8:42 AM

ಏಕಾಏಕಿ ಎಲ್ಲರೂ ಥಿಯೇಟರ್ ಒಳಗೆ ಹೋಗಲು ಪ್ರಯತ್ನಿಸಿದ್ದಾರೆ. ಇದರಿಂದ ಕೆಲವು ಕಾಲ ಥಿಯೇಟರ್​ನಲ್ಲಿ ಆತಂಕದ ವಾತಾವರಣ ನಿರ್ಮಾಣ ಆಯಿತು. ‘ಘೋಸ್ಟ್’ ಚಿತ್ರದಲ್ಲಿ ಶಿವರಾಜ್​ಕುಮಾರ್, ಅನುಪಮ್ ಖೇರ್ ಮೊದಲಾದವರು ನಟಿಸಿದ್ದಾರೆ.

ಅಕ್ಟೋಬರ್ 18ರ ಮಧ್ಯರಾತ್ರಿ ಬೆಂಗಳೂರಿನ ಗಾಂಧಿ ನಗರದಲ್ಲಿರುವ ಸಂತೋಷ್ ಥಿಯೇಟರ್​ನಲ್ಲಿ ‘ಘೋಸ್ಟ್’ ಸಿನಿಮಾಗೆ ಫ್ಯಾನ್​ ಶೋ ಆಯೋಜನೆ ಮಾಡಲಾಗಿತ್ತು. ಈ ವೇಳೆ ಥೀಯೇಟರ್ ಒಳಗೆ ಫ್ಯಾನ್ಸ್ ನುಗ್ಗಿದ್ದಾರೆ. ಈ ಸಂದರ್ಭದಲ್ಲಿ ಥಿಯೇಟರ್​ನ ಗಾಜುಗಳು ಪುಡಿ ಆಗಿವೆ. ಏಕಾಏಕಿ ಎಲ್ಲರೂ ಥಿಯೇಟರ್ ಒಳಗೆ ಹೋಗಲು ಪ್ರಯತ್ನಿಸಿದ್ದಾರೆ. ಇದರಿಂದ ಕೆಲವು ಕಾಲ ಥಿಯೇಟರ್​ನಲ್ಲಿ ಆತಂಕದ ವಾತಾವರಣ ನಿರ್ಮಾಣ ಆಯಿತು. ‘ಘೋಸ್ಟ್’ ಚಿತ್ರದಲ್ಲಿ ಶಿವರಾಜ್​ಕುಮಾರ್ (Shivarajkumar), ಅನುಪಮ್ ಖೇರ್ ಮೊದಲಾದವರು ನಟಿಸಿದ್ದಾರೆ. ಶ್ರೀನಿ ಅವರು ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಮೆಚ್ಚುಗೆ ಸಿಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Oct 19, 2023 08:28 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More