ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ವಿದೇಶ ಸುತ್ತುತ್ತಿದ್ದರೆ ಅಥಣಿಯಲ್ಲಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ರೌಂಡ್ಸ್ ಹಾಕುತ್ತಿದ್ದಾರೆ!
ಜಾರಕಿಹೊಳಿ ಕಳೆದುಹೋಗಿರುವ ತಮ್ಮ ವರ್ಚಸನ್ನು ವಾಪಸ್ಸು ಪಡೆಯುವ ಪ್ರಯತ್ನದಲ್ಲಿ ತೊಡಗಿದ್ದರೆ, ಲಕ್ಷ್ಮಿ ಹೆಬ್ಬಾಳ್ಕರ್ ತಮ್ಮ ಇಲಾಖೆಯ ಕೆಲಸಗಳಲ್ಲಿ ಮಗ್ನರಾಗಿದ್ದಾರೆ ಮತ್ತು ಸವದಿ ಕೃಷಿ ಅಧ್ಯಯನಕ್ಕಾಗಿ ವಿದೇಶ ಪ್ರವಾಸ ತೆರಳಿದ್ದಾರೆ. ಸವದಿ ಯುಎಸ್ ನಲ್ಲಿರುವ ಫೋಟೋಗಳನ್ನು ನೋಡಬಹುದು. ಇತ್ತ, ಜಾರಕಿಹೊಳಿ ಅಥಣಿಯಲ್ಲಿ ಓಡಾಡುತ್ತಾ ಜನರೊಂದಿಗೆ ಬೆರೆಯುತ್ತಿದ್ದಾರೆ, ಖಾಸಗಿ ಸಮಾರಂಭಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಬೆಳಗಾವಿ: ಜಿಲ್ಲೆಯಲ್ಲಿ ಈಗ ರಾಜಕೀಯ ಸಮೀಕರಣಗಳು ಬದಲಾಗಿವೆ. ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ಬಿಎಸ್ ಯಡಿಯೂರಪ್ಪ (BS Yediyurappa) ಸರ್ಕಾರದಲ್ಲಿ ಮಂತ್ರಿಯಾದಾಗ ಅವರ ಬದ್ಧ ವೈರಿಗಳಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಮತ್ತು ಲಕ್ಷ್ಮಣ ಸವದಿ (Laxman Savadi) ಶಾಸಕರಾಗಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಹೆಬ್ಬಾಳ್ಕರ್, ಸಿದ್ದರಾಮಯ್ಯ ಸರ್ಕಾರದಲ್ಲಿ ಮಂತ್ರಿಯಾಗಿದ್ದರೆ, ವಿಧಾನ ಸಭಾ ಚುನಾವಣೆಗೆ ಮೊದಲು ಬಿಜೆಪಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಜಿಗಿದು ಅಥಣಿಯಿಂದ ಗೆದ್ದ ಸವದಿ ಪ್ರಭಾವಿ ಶಾಸಕರೆನಿಸಿಕೊಂಡಿದ್ದಾರೆ. ಇವರಿಬ್ಬರನ್ನು ಸೋಲಿಸುವ ಪಣ ತೊಟ್ಟಿದ್ದ ರಮೇಶ್ ಭಾರೀ ಮುಖಭಂಗವಾಗಿದ್ದು ಕನ್ನಡಿಗರಿಗೆಲ್ಲ ಗೊತ್ತು. ಈಗ ಜಾರಕಿಹೊಳಿ ಕಳೆದುಹೋಗಿರುವ ತಮ್ಮ ವರ್ಚಸನ್ನು ವಾಪಸ್ಸು ಪಡೆಯುವ ಪ್ರಯತ್ನದಲ್ಲಿ ತೊಡಗಿದ್ದರೆ, ಲಕ್ಷ್ಮಿ ಹೆಬ್ಬಾಳ್ಕರ್ ತಮ್ಮ ಇಲಾಖೆಯ ಕೆಲಸಗಳಲ್ಲಿ ಮಗ್ನರಾಗಿದ್ದಾರೆ ಮತ್ತು ಸವದಿ ಕೃಷಿ ಅಧ್ಯಯನಕ್ಕಾಗಿ ವಿದೇಶ ಪ್ರವಾಸ ತೆರಳಿದ್ದಾರೆ. ಸವದಿ ಯುಎಸ್ ನಲ್ಲಿರುವ ಫೋಟೋಗಳನ್ನು ನೋಡಬಹುದು. ಇತ್ತ, ಜಾರಕಿಹೊಳಿ ಅಥಣಿಯಲ್ಲಿ ಓಡಾಡುತ್ತಾ ಜನರೊಂದಿಗೆ ಬೆರೆಯುತ್ತಿದ್ದಾರೆ, ಖಾಸಗಿ ಸಮಾರಂಭಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ