Road shows in Karnataka: ಬೆಳಗಾವಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ರೋಡ್ ಶೋ ನಡೆಸಿದರೆ ಸಿದ್ದರಾಮಯ್ಯ ಜಮಖಂಡಿಯಲ್ಲಿ ನಡೆಸಿದರು!

ಅರುಣ್​ ಕುಮಾರ್​ ಬೆಳ್ಳಿ

Updated on: Feb 27, 2023 | 5:04 PM

ಸಿದ್ದರಾಮಯ್ಯನವವ ರೋಡ್ ಶೋನಲ್ಲಿ ಬೈಕ್ ರ‍್ಯಾಲಿಯೂ ನಡೆದಂತಿದೆ. ಸಾವಿರಾರು ಬೈಕ್ ಸವಾರರನ್ನು ರೋಡ್ ಶೋನಲ್ಲಿ ಕಾಣಬಹುದು.

ಬಾಗಲಕೋಟೆ: ಅತ್ತ ಬೆಳಗಾವಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM ಡೆNarendra Modi) ಭರ್ಜರಿಯಾಗಿ ರೋಡ್ ಶೋ ನಡೆಸಿದರೆ ಇತ್ತ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ (Jamakhandi) ಕಾಂಗ್ರೆಸ್ ಹಿರಿಯ ಮುಖಂಡ ಸಿದ್ದರಾಮಯ್ಯ (Siddaramaiah) ಕೂಡ ಬೃಹತ್ ರೋಡ್ ಶೋ ನಡೆಸಿದರು. ಪ್ರಜಾಧ್ವನಿ ಯಾತ್ರೆ ಅಂಗವಾಗಿ ಪಟ್ಟಣದ ಕಡಪಟ್ಟಿ ಬಸವಣ್ಣನ ಗುಡಿ ಬಳಿ ಆಯೋಜಿಸಲಾಗಿರುವ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಲು ಸಿದ್ದರಾಮಯ್ಯಯನವರು ಬೆಂಗಳೂರಿಂದ ಹೆಲಿಕ್ಯಾಪ್ಟರ್ ನಲ್ಲಿ ಆಗಮಿಸಿದರು. ಸಿದ್ದರಾಮಯ್ಯನವವ ರೋಡ್ ಶೋನಲ್ಲಿ ಬೈಕ್ ರ‍್ಯಾಲಿಯೂ ನಡೆದಂತಿದೆ. ಸಾವಿರಾರು ಬೈಕ್ ಸವಾರರನ್ನು ರೋಡ್ ಶೋನಲ್ಲಿ ಕಾಣಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 27, 2023 05:00 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.