ವಿಜಯೇಂದ್ರ ಗೊಂದಲದಲ್ಲಿದ್ದರೆ, ಕುಮಾರಸ್ವಾಮಿಗೆ ನಾಲಗೆ ಮೇಲೆ ಹಿಡಿತವಿಲ್ಲ: ಎನ್ ಚಲುವರಾಯಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ

Updated on: Nov 21, 2023 | 1:04 PM

ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಬಗ್ಗೆ ಮಾತಾಡಿದ ಸಚಿವ, ಅವರಿಗೆ ನಾಲಗೆ ಮೇಲೆ ಹಿಡಿತದಲ್ಲಿಲ್ಲ, ಮನಸ್ಸಿಗೆ ಬಂದ ಹಾಗೆ ಮಾತಾಡುತ್ತಿದ್ದಾರೆ, ಹಳ್ಳಿಯಲ್ಲಿ ಹುಟ್ಟಿದವನಾಗಿರುವುದರಿಂದ ಅವರಂತೆ ಭಾಷೆ ಪ್ರಯೋಗಿಸುವುದು ಚೆನ್ನಾಗಿ ಗೊತ್ತು, ಅವರ ಬಳಸುವ ಭಾಷೆಯ ಅಪ್ಪನಂಥ ಭಾಷೆಯನ್ನು ತಾನೂ ಕೂಡ ಬಳಸಬಲ್ಲೆ ಎಂದು ಹೇಳಿದರು.

ಮಂಡ್ಯ: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ (N Cheluvarayaswamy), ಜೆಡಿಎಸ್ ಮತ್ತು ಬಿಜೆಪಿ ಎರಡೂ ಪಕ್ಷಗಳ ರಾಜ್ಯಾಧ್ಯಕ್ಷರ ವಿರುದ್ಧ ಟೀಕಾ ಪ್ರಹಾರ ನಡೆಸಿದರು.ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ನೀಡರುವ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಚಲುವರಾಯಸ್ವಾಮಿ, ಜನರ ಗಮನ ಡೈವರ್ಟ್ ಮಾಡಲು ಅವರು ಹಾಗೆ ಮಾತಾಡುತ್ತಿದ್ದಾರೆ ಯಾಕೆಂದರೆ ಅವರನ್ನುಪಕ್ಷದ ಅಧ್ಯಕ್ಷ ಮಾಡಿದ್ದು ಯಾರಿಗೂ ಇಷ್ಟವಿಲ್ಲ, ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಅರ್ ಅಶೋಕ, ಅಧ್ಯಕ್ಷರೊಂದಿಗೆ ಸೇರಿ ಭಿನ್ನಾಭಿಪ್ರಾಯಗಳನ್ನು ಬಗೆಹರಿಸುವುದಾಗಿ ಹೇಳಿದ್ದಾರೆ, ನೋಡೋಣ ಏನು ಮಾಡ್ತಾರೆ ಅಂತ ಹೇಳಿದರು. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಬಗ್ಗೆ ಮಾತಾಡಿದ ಸಚಿವ, ಅವರಿಗೆ ನಾಲಗೆ ಮೇಲೆ ಹಿಡಿತದಲ್ಲಿಲ್ಲ, ಮನಸ್ಸಿಗೆ ಬಂದ ಹಾಗೆ ಮಾತಾಡುತ್ತಿದ್ದಾರೆ, ಹಳ್ಳಿಯಲ್ಲಿ ಹುಟ್ಟಿದವನಾಗಿರುವುದರಿಂದ ಅವರಂತೆ ಭಾಷೆ ಪ್ರಯೋಗಿಸುವುದು ಚೆನ್ನಾಗಿ ಗೊತ್ತು, ಅವರ ಬಳಸುವ ಭಾಷೆಯ ಅಪ್ಪನಂಥ ಭಾಷೆಯನ್ನು ತಾನೂ ಕೂಡ ಬಳಸಬಲ್ಲೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.