ಬೆಂಗಳೂರಿನಲ್ಲಿ ವಕೀಲನ ಕೊಲೆ: ಸಂಬಂಧಿಕರ ಶಾಕಿಂಗ್ ರಿಯಾಕ್ಷನ್!

Edited By:

Updated on: Oct 19, 2026 | 12:35 PM

ಬೆಂಗಳೂರಿನ ವೈಟ್‌ಫೀಲ್ಡ್‌ ಪಟ್ಟಂದೂರು ಅಗ್ರಹಾರದಲ್ಲಿ ವಕೀಲ ಮಂಜುನಾಥ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಿದ್ದಾರೆ. ಬಾಡಿಗೆ ವಸೂಲಿಗೆ ಬಂದಾಗ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಬಾಡಿಗೆದಾರನೊಬ್ಬ ಗನ್ ಹಿಡಿದು ಬರುವುದು ಅನುಮಾನ ಹುಟ್ಟಿಸಿದೆ ಎಂದು ಮೃತರ ಸಂಬಂಧಿ ಅಕ್ಷಯ್ ಹೇಳಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.

ಬೆಂಗಳೂರು, ಅಕ್ಟೋಬರ್ 19: ಬೆಂಗಳೂರಿನ ವೈಟ್‌ಫೀಲ್ಡ್‌ ಪಟ್ಟಂದೂರು ಅಗ್ರಹಾರದಲ್ಲಿ ವಕೀಲ ಮಂಜುನಾಥ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ತಡರಾತ್ರಿ ನಡೆದಿದೆ. ದುಷ್ಕರ್ಮಿಗಳು ಮಂಜುನಾಥ್ ಅವರ ಹಣೆಗೆ ಗುಂಡಿಕ್ಕಿ ಪರಾರಿಯಾಗಿದ್ದಾರೆ.

ಮೃತರ ಸಂಬಂಧಿ ಅಕ್ಷಯ್ ನೀಡಿರುವ ಮಾಹಿತಿಯ ಪ್ರಕಾರ, ರಾತ್ರಿ 11 ಗಂಟೆ ಸುಮಾರಿಗೆ ಬಾಡಿಗೆ ಕೊಡಲು ಬಂದಿದ್ದ ವ್ಯಕ್ತಿಯೊಬ್ಬ ಅಟೆನ್ಶನ್ ಡೈವರ್ಟ್ ಮಾಡಿ ನಿಂತಿದ್ದಾಗ, ಹಿಂದಿನಿಂದ ಬಂದ ಇನ್ನೊಬ್ಬ ವ್ಯಕ್ತಿ ಮಂಜುನಾಥ್ ಅವರಿಗೆ ಗುಂಡು ಹಾರಿಸಿದ್ದಾರೆ. ಮಂಜುನಾಥ್ ಅವರು ಬಾಡಿಗೆ ಹಣ ಎಣಿಸುತ್ತಿದ್ದಾಗ ಈ ಕೃತ್ಯ ನಡೆದಿದೆ. ಮಂಜುನಾಥ್ ಅವರ ತಲೆಗೆ ಗುಂಡು ತಗುಲಿದ್ದು, ತಕ್ಷಣ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಬ್ರೈನ್ ಡೆಡ್ ಆಗಿರುವುದು ದೃಢಪಟ್ಟಿದೆ.

ಬಾಡಿಗೆ ಕೊಡಲು ಬಂದವನ ಬಳಿ ಗನ್ ಇರಲು ಹೇಗೆ ಸಾಧ್ಯ ಎಂದು ಅಕ್ಷಯ್ ಅನುಮಾನ ವ್ಯಕ್ತಪಡಿಸಿದ್ದಾರೆ. ಇದು ಬಾಡಿಗೆ ವಿಚಾರದ ಗಲಾಟೆಯಲ್ಲ, ಯಾರೋ ಬಾಡಿಗೆದಾರರನ್ನು ಹೈಲ್ ಮಾಡಿಸಿ ಕೊಲೆ ಮಾಡಿಸಿರುವ ಸಾಧ್ಯತೆ ಇದೆ ಎಂದು ಅವರು ಆರೋಪಿಸಿದ್ದಾರೆ. ಮಂಜುನಾಥ್ ವೃತ್ತಿಯಲ್ಲಿ ವಕೀಲರಾಗಿದ್ದು, ಬೇರೆ ಯಾವುದೇ ರಿಯಲ್ ಎಸ್ಟೇಟ್ ಅಥವಾ ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರಲಿಲ್ಲ ಎಂದು ಅಕ್ಷಯ್ ಸ್ಪಷ್ಟಪಡಿಸಿದ್ದಾರೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ವಿಕಾಸ್​ ಬಿಎಂ

ವಿಕಾಸ್​ ಬಿಎಂ ಅವರು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ. ಮೈಸೂರು ಯೂನಿವರ್ಸಿಟಿ ಯಲ್ಲಿ ಶಿಕ್ಷಣ ಮುಗಿಸಿ, 2014 ರಿಂದ ಎಲೆಕ್ಟ್ರಾನಿಕ್ ಮಾದ್ಯಮದಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ಸದ್ಯ ಬೆಂಗಳೂರು ಕ್ರೈಂ ವರದಿಗಾರನಾಗಿ 11 ವರ್ಷ ಸೇವೆ ಸಲ್ಲಿಸಿದ್ದಾರೆ. ಕ್ರೈಂ ರಿಪೋರ್ಟಿಂಗ್ ಹಾಗು ಇನ್ವೆಷ್ಟಿಗೇಟಿವ್ ವರದಿಗಾರರಾಗಿ ಹಾಗು ಸ್ಟಿಂಗ್ ಆಪರೇಷನ್​ಗಳನ್ನ ಮಾಡಿದ್ದಾರೆ. ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಸುದ್ದಿ ಮೊದಲು ಬ್ರೇಕ್ ಮಾಡಿದ್ದಲ್ಲದೆ, ಶಂಕಿತರ ಸಿಸಿ ಕ್ಯಾಮರಾ ವಿಡಿಯೋಗಳನ್ನ ಪ್ರಸರಣ ಮಾಡಿ ಸಂಸ್ಥೆಯಿಂದ ಪ್ರಶಂಸೆಗೆ ಪಾತ್ರನಾಗಿದ್ದಾರೆ. ಅಲ್ಲದೇ ಬೆಂಗಳೂರಲ್ಲಿ ಟೈಡಾಲ್ ಡ್ರಗ್ ಸೇವನೆಯ ಸ್ಟಿಂಗ್ ಆಪರೇಷನ್ ಮಾಡಿ, ಮೆಡಿಕಲ್ ಗಳಲ್ಲಿ ಟೈಡಾಲ್ ಮಾತ್ರೆಯ ಮಾರಟ ನಿಯಂತ್ರಣಕ್ಕೆ ಬರುವಂತೆ ಮಾಡಿದ್ದಾರೆ. ನೊಂದವರ ಪರವಾಗಿ ನಿಂತು ವಸ್ತುನಿಷ್ಠವಾಗಿ ಸುದ್ದಿಗಳನ್ನ ನೀಡಿ ನ್ಯಾಯ ಕೊಡಿಸುವುದು ಇವರ ಮೊದಲ ಉದ್ದೇಶ. ಸದ್ಯ ಟಿವಿ9 ಸಂಸ್ಥೆಯಲ್ಲಿ ಬೆಂಗಳೂರು ಕ್ರೈಂ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ರೋಡ್ ಟ್ರಿಪ್, ಕ್ರಿಕೆಟ್‌, ವಾಲಿಬಾಲ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್ ಪುಸ್ತಕ ಓದುವುದು ಮತ್ತು ಕ್ರೈಂ ತ್ರಿಲ್ಲರ್ ಸಿನಿಮಾಗಳನ್ನ ನೋಡುವುದು ಇವರ ಹವ್ಯಾಸಗಳು.

Read More