AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮಗೆ ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಸರ್ಕಾರದ ವಿರುದ್ಧ ಪ್ರಲ್ಹಾದ್​ ಜೋಶಿ ಕಿಡಿ

ನಿಮಗೆ ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಸರ್ಕಾರದ ವಿರುದ್ಧ ಪ್ರಲ್ಹಾದ್​ ಜೋಶಿ ಕಿಡಿ

ಗಂಗಾಧರ​ ಬ. ಸಾಬೋಜಿ
|

Updated on:May 14, 2026 | 6:03 PM

Share

ಕರ್ನಾಟಕ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜಕಾರಣ ಶಿಕ್ಷಣ ಕ್ಷೇತ್ರಕ್ಕೆ ಕಾಲಿಟ್ಟಿದೆ. ಸುಪ್ರೀಂ ಕೋರ್ಟ್‌ನಲ್ಲಿ ಹಿಜಾಬ್ ಪ್ರಕರಣ ಬಾಕಿ ಇರುವಾಗಲೇ ನಿಷೇಧ ವಾಪಸ್ ಪಡೆದಿರುವುದು ನ್ಯಾಯಾಂಗಕ್ಕೆ ಅವಮಾನ. ಸಮವಸ್ತ್ರ ಸಂಹಿತೆಯ ಉದ್ದೇಶ ಸಮಾನತೆ ಕಾಪಾಡುವುದು, ಆದರೆ ಸರ್ಕಾರ ಧರ್ಮದ ಆಧಾರದ ಮೇಲೆ ತಾರತಮ್ಯ ಎಸಗುತ್ತಿದೆ. ಈ ವಿಭಜಕ ನೀತಿಯಿಂದ ಶೈಕ್ಷಣಿಕ ವಾತಾವರಣ ಹಾಳಾಗುತ್ತಿದ್ದು, ಶಾಲಾ ಶಿಸ್ತಿಗೆ ಧಕ್ಕೆ ತರುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ ವಾಗ್ದಾಳಿ ಮಾಡಿದ್ದಾರೆ.

ಬೆಂಗಳೂರು, ಮೇ 14: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್​​ಗೆ ಮತ್ತೆ ಅವಕಾಶ ನೀಡಿರುವುದಕ್ಕೆ ಬಿಜೆಪಿ ಕೆರಳಿ ಕೆಂಡವಾಗಿದೆ. ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನ ತೀವ್ರವಾಗಿ ಖಂಡಿಸಿದೆ. ಈ ಮೂಲಕ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ರಾಜಕೀಯ ಜಟಾಪಟಿ ಶುರುವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಲ್ಹಾದ್​​​​​ ಜೋಶಿ, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ನಿಮಗೆ ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ತುಷ್ಠಿಕರಣದ ರಾಜಕಾರಣ ಮಾಡಿರುವವರನ್ನು ಜನರು ಮನೆಗೆ ಕಳುಹಿಸಿದ್ದಾರೆ ಎಂದರು. ದೇಶದಲ್ಲಿ ಈಗಲೂ ಶೇಕಡಾ 80ರಷ್ಟು ಹಿಂದೂಗಳಿದ್ದಾರೆ. ಓಲೈಕೆ ರಾಜಕಾರಣದಿಂದ TMC, DMK ಮನೆಗೆ ಹೋಗಿವೆ. ಕಾಂಗ್ರೆಸ್ ಸ್ಥಿತಿ ಈಗ ಹೇಗಾಗಿದೆ ಎನ್ನುವುದು ಸ್ಪಷ್ಟವಾಗಿದೆ. ಹಿಜಾಬ್ ಧರಿಸುವ ಬಗ್ಗೆ ಪ್ರಕರಣ ಕೋರ್ಟ್​ನಲ್ಲಿದೆ. ಕೂಡಲೇ ನಿಮ್ಮ ಆದೇಶ ಹಿಂಪಡೆಯಿರಿ ಎಂದು ಆಗ್ರಹಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

 

Published on: May 14, 2026 06:02 PM
Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More