ರಾಜೀನಾಮೆ ಬೆದರಿಕೆ ಹಾಕಿದವರು ಯಾರು? ಸಿಎಂಗೇ ನೇರ ಕರೆ ಮಾಡಿ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್

Edited By:

Updated on: Aug 04, 2026 | 5:33 PM

ಸಚಿವ ಸಂಪುಟ ವಿಸ್ತರಣೆ ನಂತರ ಅಸಮಾಧಾನಗೊಂಡಿರುವ ಶಾಸಕರ ರಾಜೀನಾಮೆ ಬೆದರಿಕೆ ಕುರಿತು ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ ನೀಡಿದ ಬೆನ್ನಲ್ಲೇ ಮತ್ತೊಂದು ಮಾಹಿತಿ ತಿಳಿದುಬಂದಿದೆ. ಹೈಕಮಾಂಡ್ ಕೂಡ ರಾಜೀನಾಮೆ ಬೆದರಿಕೆ ಹಾಕಿದವರ ವಿವರ ಕೇಳಿದೆ ಎನ್ನಲಾಗಿದೆ. ಅಲ್ಲದೆ, ಸಚಿವ ಸ್ಥಾನ ವಂಚಿತರಿಗೆ ನಿಗಮ ಮಂಡಳಿ ಸ್ಥಾನಗಳನ್ನು ನೀಡಲು ಸೂಚಿಸಿದ್ದು, ರಾಜೀನಾಮೆ ನೀಡಿದರೆ ಸ್ವೀಕರಿಸಲು ಅನುಮತಿ ನೀಡಿದೆ.

ಬೆಂಗಳೂರು, ಆಗಸ್ಟ್ 4: ಸಚಿವ ಸಂಪುಟ ವಿಸ್ತರಣೆಯ ಬಳಿಕ ಸಚಿವ ಸ್ಥಾನ ಕೈತಪ್ಪಿದ ಕೆಲವು ಕಾಂಗ್ರೆಸ್ ಶಾಸಕರಲ್ಲಿ ತೀವ್ರ ಅಸಮಾಧಾನ ಭುಗಿಲೆದ್ದಿದೆ. ಈ ಹಿನ್ನೆಲೆಯಲ್ಲಿ ಕೆಲವು ಶಾಸಕರು ರಾಜೀನಾಮೆ ನೀಡುವ ಬೆದರಿಕೆ ಹಾಕಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್ ಸಿಎಂ ಡಿಕೆ ಶಿವಕುಮಾರ್‌ ಅವರಿಗೆ ಕರೆ ಮಾಡಿ, ರಾಜೀನಾಮೆ ಬೆದರಿಕೆ ಹಾಕುವವರ ವಿವರ ಕೇಳಿದೆ. ಅಲ್ಲದೆ, ರಾಜೀನಾಮೆ ನೀಡಿದರೆ ಅದನ್ನು ತಕ್ಷಣವೇ ಅಂಗೀಕರಿಸುವಂತೆ ಸೂಚಿಸಿದೆ.

ಇದರ ಬೆನ್ನಲ್ಲೇ ಸಿಎಂ ಡಿಕೆ ಶಿವಕುಮಾರ್‌ ಬೆಂಗಳೂರಿನಲ್ಲಿ ಎಚ್ಚರಿಕೆ ನೀಡಿ, ರಾಜೀನಾಮೆ ನೀಡಿದರೆ ಕೂಡಲೇ ಅದನ್ನು ಅಂಗೀಕರಿಸಲಾಗುವುದು ಎಂದು ತಿಳಿಸಿದ್ದಾರೆ. ಸಚಿವ ಸ್ಥಾನ ಸಿಗದವರಿಗೆ ನಿಗಮ ಮಂಡಳಿ ಹುದ್ದೆಗಳನ್ನು ನೀಡಲಾಗುವುದು. ಆದರೂ ರಾಜೀನಾಮೆಗೆ ಮುಂದಾದರೆ, ಹೈಕಮಾಂಡ್ ಸೂಚನೆಯಂತೆ ಅದನ್ನು ಸ್ವೀಕರಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಕ್ಷದ ಹಿತಾಸಕ್ತಿ ಎಲ್ಲಕ್ಕಿಂತ ಮುಖ್ಯ ಎಂದು ಸಿಎಂ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Aug 04, 2026 01:42 PM
Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More