ಯಾರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ?: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೊಟ್ರು ಬಿಗ್​​ ಅಪ್ಡೇಟ್​​

Edited By:

Updated on: May 31, 2026 | 12:15 PM

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕದ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತನಾಡಿದ್ದಾರೆ. ಸಚಿವ ಸಂಪುಟ ವಿಸ್ತರಣೆ, ಉಪ ಮುಖ್ಯಮಂತ್ರಿ ಸ್ಥಾನಗಳ ಪ್ರಸ್ತಾಪ ಮತ್ತು ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಕುರಿತು ಚರ್ಚಿಸಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಿಂದ ಡಿಸಿಎಂ ಬೇಡಿಕೆ ಕೇಳಿಬಂದಿದ್ದು, ಪಕ್ಷದ ದೃಷ್ಟಿಯಿಂದ ಉತ್ತಮ ನಾಯಕರನ್ನು ಆಯ್ಕೆ ಮಾಡುವ ಅಗತ್ಯವಿದೆ ಎಂದು ಅವರು ಒತ್ತಿ ಹೇಳಿದ್ದಾರೆ.

ಕಲಬುರಗಿ, ಮೇ 31: ಹಾಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿ.ಕೆ. ಶಿವಕುಮಾರ್​​ ಸಿಎಂ ಆಗಿ ಆಯ್ಕೆಯಾಗುತ್ತಿದ್ದಂತೆ ಪಕ್ಷದ ಅಧ್ಯಕ್ಷ ಸ್ಥಾನಕ್ಕಾಗಿ ರಾಜ್ಯ ಕಾಂಗ್ರೆಸ್​​ನಲ್ಲಿ ಪೈಪೋಟಿ ಶುರುವಾಗಿದೆ. ಈ ಬಗ್ಗೆ ಕಲಬುರಗಿಯಲ್ಲಿ ಮಾಹಿತಿ ನೀಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಕೆಶಿ ಸಿಎಂ ಆದ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಹಜವಾಗಿ ಬದಲಾವಣೆ ಆಗುತ್ತೆ. ಜನ ಬೆಂಬಲ ಇರುವ ಸೂಕ್ತ ವ್ಯಕ್ತಿಗೆ ಪಕ್ಷದ ಅಧ್ಯಕ್ಷ ಸ್ಥಾನ ನೀಡುತ್ತೇವೆ. ಸಿಎಂಗೆ ಉತ್ತಮ ಸಮನ್ವಯ ಇರಬೇಕು, ಅಂತವರನ್ನು ಆಯ್ಕೆ ಮಾಡ್ತೇವೆ. ವಿಧಾನಸಭಾ ಚುನಾವಣೆಗೆ ಕೇವಲ 24 ತಿಂಗಳು ಮಾತ್ರ ಬಾಕಿಯಿರುವ ಕಾರಣ ಎಲೆಕ್ಷನ್​​ ಮತ್ತು ಪಕ್ಷ ಕಟ್ಟುವ ದೃಷ್ಟಿಯಿಂದ ಆಯ್ಕೆ ಮಾಡಬೇಕಾಗುತ್ತೆ. ಸ್ಪೀಡ್ ಆಗಿ, ಕಲೆಕ್ಟಿವ್ ಆಗಿ ಎಲ್ಲರನ್ನೂ ಒಗ್ಗಟ್ಟಾಗಿ ತಗೊಂಡು ಹೋಗುವ ನಾಯಕನನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾವು ಹುಡುಕಬೇಕಿದೆ. ಜೊತೆಗೆ ಅವರಿಗೆ ಕೋ-ಆಪರೇಟ್ ಮಾಡುವ ಜನರೂ ಇರಬೇಕಾಗುತ್ತದೆ. ಇವೆಲ್ಲವೂ ವಿಚಾರ ಮಾಡಿ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ನಡೆಯಲಿದೆ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: May 31, 2026 12:09 PM
Follow Us