ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ

Updated on: Dec 23, 2025 | 9:56 AM

ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟ ಅವರು ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ. ಅವರು ಮಾಡುವ ಕ್ವಾಟ್ಲೆಗಳು ಒಂದೆರಡಲ್ಲ. ಈಗ ಇಡೀ ಮನೆಯವರು ಗಿಲ್ಲಿಗೆ ತೊಂದರೆ ಕೊಡುತ್ತಿದ್ದಾರೆ. ಆ ಸಂದರ್ಭದ ವಿಡಿಯೋನ ಸೋಶಿಯಲ್ ಮೀಡಿಯಾ ಮೂಲಕ ಹಂಚಿಕೊಳ್ಳಲಾಗಿದೆ.  ಈ ವಿಡಿಯೋ ಸಾಕಷ್ಟು ಗಮನ ಸೆಳೆಯೋ ರೀತಿ ಇದೆ. 

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ ಅವರು ಎಲ್ಲರ ಜೊತೆ ಫನ್ ಆಗಿ ನಡೆದುಕೊಳ್ಳುತ್ತಾರೆ. ಕೆಲವೊಮ್ಮೆ ಇದು ಮಿತಿ ಮೀರಿದ್ದೂ ಇದೆ. ಈ ವೇಳೆ ಮನೆಯ ಸ್ಪರ್ಧಿಗಳು ಇರಿಟೇಟ್ ಆಗುತ್ತಾರೆ. ಈಗ ಎಲ್ಲರಿಗೂ ಸೇಡು ತೀರಿಸಿಕೊಳ್ಳುವ ಸಮಯ. ಗಿಲ್ಲಿಗೆ ಪಾಸ್ ಎಂದರು ಬಿಗ್ ಬಾಸ್. ಈ ವೇಳೆ ಅವರ ಲುಕ್​​ನೇ ಬದಲಿಸಿದ್ದಾರೆ ಸ್ಪರ್ಧಿಗಳು. ಆ ಸಂದರ್ಭದ ಫನ್ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More